
Hubballi : ಗ್ಯಾಸ್ ಲೀಕ್ ಆಗಿ ಸಿಲಿಂಡರ್ ಬ್ಲಾಸ್ಟ್ – ಇಬ್ಬರು ಸಾವು, ಮಹಿಳೆ ಗಂಭೀರ
ಗ್ಯಾಸ್ ಲೀಕ್ ಆಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಹಳೇ Hubballi ಯ ಅಯೋಧ್ಯಾ ನಗರದಲ್ಲಿ ನಡೆದಿದೆ.
ಇಬ್ಬರು ಸಾವು, ಮಹಿಳೆ ಗಂಭೀರ
ಮೃತರನ್ನು ಮೋಹನ್ ಕಲಾಲ್ (40) ಮತ್ತು ಪ್ರವೀಣ್ ಕಲಾಲ್ (46) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪ್ರವೀಣ್ ಕಲಾಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಕಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಸುಮನ ಕಲಾಲ್ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
READ THIS : ಟೈರ್ ಬ್ಲಾಸ್ಟ್ ಆಗಿ ಬಸ್ಸಿಗೆ ಟಿಪ್ಪರ್ ಡಿಕ್ಕಿ – ಮೂವರು ಸಾವು..!!

ಗ್ಯಾಸ್ ಲೀಕ್ ಆಗಿ ಸಿಲಿಂಡರ್ ಬ್ಲಾಸ್ಟ್
ಗ್ಯಾಸ್ ಸೋರಿಕೆಯಿಂದಾಗಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಸಿಲಿಂಡರ್ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಇನ್ನು ಈ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
MUST WATCH : ನಿಷೇಧದ ನಡುವೆಯೂ DJ ಬಳಸಿ DANCE – SOUND SYSTEM SEIZE ಮಾಡಿ CASE ದಾಖಲು




