ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ D K Shivakumar ಆಯ್ಕೆಯಾಗಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಿಎಲ್ಪಿ ಸಭೆಯಲ್ಲಿ ಸಿದ್ದರಾಮಯ್ಯ ಪ್ರಸ್ತಾಪಿಸಿದ ನಿರ್ಣಯಕ್ಕೆ ಸರ್ವಾನುಮತ ಬೆಂಬಲ ವ್ಯಕ್ತವಾಯಿತು.

ಬೆಂಗಳೂರುದಲ್ಲಿ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕನಾಗಿ D K Shivakumar ಆಯ್ಕೆಯಾಗಿದ್ದಾರೆ.
ಇದರೊಂದಿಗೆ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಅವರ ಮಾರ್ಗ ಸುಗಮವಾಗಿದೆ.
ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಕ ಭಾಷಣ ಮಾಡಿದರು.
ಬಳಿಕ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಪ್ರಸ್ತಾಪಿಸಿದರು. ಈ ಪ್ರಸ್ತಾವನೆಯನ್ನು ಹಿರಿಯ ನಾಯಕ ಜಿ. ಪರಮೇಶ್ವರ್ ಅನುಮೋದಿಸಿದರು.

ಅದಾದ ಬಳಿಕ ಸಭೆಯಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಶಾಸಕರು ಕೈ ಎತ್ತುವ ಮೂಲಕ ಡಿ.ಕೆ. ಶಿವಕುಮಾರ್ ಅವರ ಆಯ್ಕೆಗೆ ಸರ್ವಾನುಮತದ ಬೆಂಬಲ ಸೂಚಿಸಿದರು.
ಹೀಗಾಗಿ ಯಾವುದೇ ಸ್ಪರ್ಧೆ ಅಥವಾ ಗೊಂದಲವಿಲ್ಲದೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.
ಸಿದ್ದರಾಮಯ್ಯ ರಾಜೀನಾಮೆ ಘೋಷಣೆ
ಸಭೆಯಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಿಸಿದರು. ಅವರ ಘೋಷಣೆಗೆ ಜಿ. ಪರಮೇಶ್ವರ್ ಬೆಂಬಲ ಸೂಚಿಸಿದರು.
ಕೇವಲ ಐದು ನಿಮಿಷಗಳಲ್ಲೇ ನಾಯಕನ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಪಕ್ಷದ ಏಕತೆಯನ್ನು ಮತ್ತೊಮ್ಮೆ ಪ್ರದರ್ಶಿಸಿತು.
MUST READ : Weather News : ಇನ್ನೆರಡು ದಿನ 19 ರಾಜ್ಯಗಳಲ್ಲಿ ಭಾರೀ ಮಳೆ ಅಲರ್ಟ್….!!

ಹೈಕಮಾಂಡ್ ಜೊತೆ ಸಮಾಲೋಚನೆ
ಇದರ ನಡುವೆ ಸಿಎಲ್ಪಿ ಸಭೆಗೆ ಕೆಲಕಾಲ ವಿರಾಮ ನೀಡಲಾಯಿತು. ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮುಖ್ಯಮಂತ್ರಿ ಕಚೇರಿಗೆ ಆಗಮಿಸಿ ಸಿದ್ದರಾಮಯ್ಯ, ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದರು.
ನಂತರ ಕೆ.ಸಿ. ವೇಣುಗೋಪಾಲ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರೆ ಮಾಡಿ, ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯ ಕುರಿತು ಅಧಿಕೃತ ಮಾಹಿತಿ ನೀಡಿದರು. ಎಐಸಿಸಿ ನಿರ್ದೇಶನದಂತೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.

ಸರ್ಕಾರ ರಚನೆಗೆ ಹಕ್ಕು ಮಂಡನೆ
ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಹಿರಿಯ ನಾಯಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
ಇದರೊಂದಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಡಿ.ಕೆ. ಶಿವಕುಮಾರ್ ಅವರು ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಈ ಬೆಳವಣಿಗೆ ಸಂಭ್ರಮಕ್ಕೆ ಕಾರಣವಾಗಿದೆ.
MUST WATCH : ಕಡು ಬಡುವರು ಕೂಡ ಹಾರದ ಜೊತೆ ತಂದೆಯ ಅಂತಿಮ ದರ್ಶನಕ್ಕೆ ಬಂದಿದ್ದಾರೆ ಎಂದು H.V. VENKATESH ಭಾವುಕ | PAVAGADA |




