ನೂತನ `CM’ ಆಗಿ D.K Shivakumar ಪ್ರಮಾಣವಚನ ಸ್ವೀಕಾರ : ನಾಳೆ ಮಧ್ಯಾಹ್ನ ಪ್ರಮುಖ ಸರ್ಕಾರಿ ಕಚೇರಿಗಳ ಸಿಬ್ಬಂದಿಗೆ ಅರ್ಧ ದಿನ ರಜೆ ಘೋಷಣೆ.!

ರಾಜ್ಯದಲ್ಲಿ ನೂತನ ಸರ್ಕಾರ ರಚನೆ ಆಗ್ತಿದ್ದು, ನಾಳೆ ಡಿ.ಕೆ ಶಿವಕುಮಾರ್ ( D.K Shivakumar ) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು, ಎಲ್ಲೆಡೆ ಬಿಗಿಭದ್ರತೆ ನಿಯೋಜಿಸಲಾಗಿದೆ.
ನಾಳೆ ಅರ್ಧ ದಿನ ರಜೆ ಘೋಷಣೆ
ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ನಾಳೆ (ಜೂನ್ 3, 2026) ಮಧ್ಯಾಹ್ನದ ನಂತರ ರಾಜ್ಯ ಸರ್ಕಾರವು ವಿಧಾನಸೌಧ ಮತ್ತು ವಿಕಾಸಸೌಧ ಸೇರಿದಂತೆ ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಅರ್ಧ ದಿನ ರಜೆ ಘೋಷಿಸಿದೆ.
ಇದನ್ನು ಓದಿ : ನಾಳೆ ಕರ್ನಾಟಕದ ನೂತನ ಸಿಎಂ ಆಗಿ DK Shivakumar ಪದಗ್ರಹಣ- ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ..!!

ಯಾರಿಗೆಲ್ಲಾ ರಜೆ..?
ಸರ್ಕಾರದ ಆದೇಶದ ಪ್ರಕಾರ, ವಿಧಾನ ಸೌಧ, ವಿಕಾಸ ಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಕೆಲಸ ಮಾಡುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಪರಾಹ್ನದಿಂದ ರಜೆ ಅನ್ವಯವಾಗಲಿದೆ.
ಪ್ರಮಾಣ ವಚನ ಕಾರ್ಯಕ್ರಮದ ಸಮಯ
ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭವು ನಾಳೆ ಸಂಜೆ 4:05 ಗಂಟೆಗೆ ಬೆಂಗಳೂರಿನ ಕರ್ನಾಟಕ ಲೋಕಾಭವನದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಜನಸಂದಣಿ ಹಾಗೂ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.

ಭದ್ರತೆ ಮತ್ತು ಸಂಚಾರ ನಿರ್ವಹಣೆ ಕಾರಣ
ಭದ್ರತೆ, ಸುರಕ್ಷತೆ ಮತ್ತು ಸುಗಮ ಸಂಚಾರ ನಿರ್ವಹಣೆಯ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿಗಳ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜೂನ್ 3ರ ಅಪರಾಹ್ನ (ಮಧ್ಯಾಹ್ನದ ನಂತರ) ರಜೆ ಘೋಷಿಸಲಾಗಿದೆ.
ಇದನ್ನು ನೋಡಿ : ಕಲ್ಪತರು ನಾಡಿಗೆ ಹೊಸ ಮೆರುಗು – ಹಸಿರು ನಗರವಾಗುತ್ತಿದೆ TIPTUR




