ಡಿ.ಕೆ ಶಿವಕುಮಾರ್ CM ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ

ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ನಗರದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಭವ್ಯ ಮೆರವಣಿಗೆ
ಕಾರಂಜಿ ಕೆರೆ ವೃತ್ತದಿಂದ ಕುರುಬಾರಹಳ್ಳಿ ವೃತ್ತದವರೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಜಾನಪದ ಹಾಗೂ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಲಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಮರದ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಅಲ್ಲದೆ, ಹಲವು ಕಡೆಗಳಲ್ಲಿ ಮುಖ್ಯಮಂತ್ರಿ ಅವರ ಭಾರೀ ಫ್ಲೆಕ್ಸ್ ಹಾಗೂ ಸ್ವಾಗತ ಫಲಕಗಳನ್ನು ಅಳವಡಿಸಲಾಗಿದೆ.
ಇದನ್ನು ಓದಿ : ಸಿಎಂ ಡಿಕೆಶಿ ಸಂಪುಟದ ನೂತನ ಸಚಿವರ ಕಂಪ್ಲೀಟ್ ಲೀಸ್ಟ್ ವೈರಲ್!
ಶಕ್ತಿ ಪ್ರದರ್ಶನಕ್ಕೂ ಕಾಂಗ್ರೆಸ್ ನಾಯಕರು ಸಜ್ಜು
CM ಡಿಕೆ ಅವರ ಶಕ್ತಿ ಪ್ರದರ್ಶನಕ್ಕೂ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಸ್ವಾಗತಿಸುವ ಯೋಜನೆಯಿದ್ದು, ವೀಳ್ಯದ ಎಲೆ, ಮಲ್ಲಿಗೆ ಹೂ ಹಾಗೂ ತಾವರೆ ಹೂಗಳಿಂದ ವಿಶೇಷ ಹಾರವನ್ನು ಅಭಿಮಾನಿಗಳು ಸಿದ್ಧಪಡಿಸಿದ್ದಾರೆ.

ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಮೆರವಣಿಗೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿಯವರ ಭೇಟಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ ನಗರದ ಪ್ರಮುಖ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಭದ್ರತೆ ಹಾಗೂ ಸಂಚಾರ ವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದನ್ನು ನೋಡಿ : BANDIPURAಕ್ಕೂ ತಟ್ಟಿದ ಬರದ ಬಿಸಿ – ಬತ್ತಿದ ಹಳ್ಳ ಕೊಳ್ಳ..! ಒಣಗಿದ ಕಾಡು





