ರೇಣುಕಾಸ್ವಾಮಿ ಕೊಲೆ ಪ್ರಕರಣ – ಜೂ.1ರಿಂದ ಸೆಷನ್ಸ್ ಕೋರ್ಟಲ್ಲಿ Darshan ಕೊಲೆ ಕೇಸ್ ವಿಚಾರಣೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಬೆಂಗಳೂರಿನ ಸಿಸಿಎಚ್ ನ್ಯಾಯಾಲಯದಿಂದ ನಗರದ 59ನೇ ಸೆಷನ್ಸ್ ಕೋರ್ಟ್ಗೆ ವರ್ಗಾವಣೆಯಾಗಿದೆ. ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದಂತೆ, ಪ್ರಕರಣದಲ್ಲಿನ ಕನಿಷ್ಠ 60 ಪ್ರಮುಖ ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ.

ಸೆಷನ್ಸ್ ಕೋರ್ಟಲ್ಲಿ ದರ್ಶನ್ ಕೊಲೆ ಕೇಸ್ ವಿಚಾರಣೆ
ಈ ಹಿನ್ನೆಲೆಯಲ್ಲಿ ಜೂನ್ 1ರಿಂದ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ತ್ವರಿತ ವಿಚಾರಣೆ ಆರಂಭವಾಗಲಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರತಿಯನ್ನು ನಟ Darshan ಪರ ವಕೀಲರು ಬೆಂಗಳೂರಿನ ಸೆಷನ್ಸ್ ಕೋರ್ಟ್ಗೆ ಸಲ್ಲಿಸಿದ್ದಾರೆ.

ಸುಜಾತಾ ಎಂ. ಸಾಮ್ರಾಣಿ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ
ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳ ಪ್ರಕಾರ, ಆರೋಪಿಗಳಿಗೆ ಒದಗಿಸಬೇಕಾದ ಕನಿಷ್ಠ ಸೌಲಭ್ಯಗಳು ಹಾಗೂ ವೇಗದ ವಿಚಾರಣೆಯ ಕ್ರಮಗಳನ್ನು ಹೇಗೆ ಜಾರಿಗೊಳಿಸಬೇಕು ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ. ನ್ಯಾಯಾಧೀಶೆ ಸುಜಾತಾ ಎಂ. ಸಾಮ್ರಾಣಿ ಅವರು ಪ್ರಕರಣದ ವಿಚಾರಣೆ ನಡೆಸಲಿದ್ದಾರೆ.
READ THIS : ಮಾದಾವರ -ತುಮಕೂರು ಮೆಟ್ರೋ ರೈಲು ಯೋಜನೆ – ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

1 ವರ್ಷದಲ್ಲಿ ಮುಗಿಯುತ್ತಾ Darshan ಕೇಸ್?
ಇದೇ ಪ್ರಕರಣದಲ್ಲಿ ಈಗಾಗಲೇ ಜಾಮೀನು ಪಡೆದು ಹೊರಗಿರುವ 5 ಆರೋಪಿಗಳ ಜಾಮೀನನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್, ಸದ್ಯ ತನ್ನ ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಹೈಕೋಟ್ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಪ್ರತಿಯನ್ನು ಸಲ್ಲಿಸಲಾಗಿದೆ.

MUST WATCH : ಕಾಂತಾರ ನಟಿಯ BIKINI PHOTO VIRAL – ಪೊಲೀಸರಿಗೆ ನಟಿ RUKMINI VASANTH ದೂರು.!




