ಪತ್ನಿ, ಪುತ್ರನ ಜೈಲಿನ ಒಳಭೇಟಿಗೆ ಅವಕಾಶ ಕೋರಿ ಕಾರಾಗೃಹ SP ಗೆ ಪತ್ರ ಬರೆದ ನಟ Darshan.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಇದೀಗ ಜೈಲಿನ ಸೂಪರಿಂಟೆಂಡೆಂಟ್ಗೆ (SP) ವಿಶೇಷ ಪತ್ರವೊಂದನ್ನು ಬರೆದಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಅವರನ್ನು ಜೈಲಿನ ಒಳಗಡೆ ಭೇಟಿ ಮಾಡಲು (ಒಳ ಸಂದರ್ಶನ) ವಿಶೇಷ ಅವಕಾಶ ಕಲ್ಪಿಸಿಕೊಡಬೇಕೆಂದು ಪತ್ರದಲ್ಲಿ ಕೋರಿದ್ದಾರೆ.

ಪತ್ರದಲ್ಲೇನಿದೆ..?
ಇತ್ತೀಚಿಗಷ್ಟೆ ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಈ ಮಹತ್ಷದ ಬೆಳವಣಿಗೆ ನಡೆದಿದೆ. ಕಾನೂನು ಹೋರಾಟದಲ್ಲಿ ಹಿನ್ನಡೆ ಕಂಡಿರುವ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರನ್ನು ಖುದ್ದಾಗಿ ಭೇಟಿಯಾಗಿ ಮುಂದಿನ ಕಾನೂನು ಕ್ರಮಗಳ ಕುರಿತು ಚರ್ಚಿಸಲು ದರ್ಶನ್ ಬಯಸಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆ ಮೇ 15ರಂದು ಜೈಲಿನ ಮುಖ್ಯ ಅಧೀಕ್ಷಕರಾದ ಅಂಶು ಕುಮಾರ್ ಅವರಿಗೆ ದರ್ಶನ್ ಅಧಿಕೃತ ಪತ್ರ ಬರೆದಿದ್ದಾರೆ. ಸಾಮಾನ್ಯ ಸಂದರ್ಶನ ವ್ಯವಸ್ಥೆಯ ಬದಲು, ಜೈಲಿನ ಒಳಗಿರುವ ಪ್ರತ್ಯೇಕ ಕೊಠಡಿಯಲ್ಲಿ ಪತ್ನಿ ಮತ್ತು ಮಗನನ್ನು ಒಂಟಿಯಾಗಿ ಭೇಟಿ ಮಾಡಲು ಅನುಮತಿ ನೀಡುವಂತೆ ಅವರು ಕೋರಿದ್ದಾರೆ.
READ THIS : H.D Devegowda ರಿಗೆ ಶುಭ ಕೋರಿದ ಎಚ್ಡಿ ಕುಮಾರಸ್ವಾಮಿ

ಅಲೋಕ್ ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ
ಇನ್ನು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮೇ 16 ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

Darshan ಮನವಿ – ಹಿರಿಯ ಅಧಿಕಾರಿಗಳು ಸಭೆ ನಡೆಸಿ ನಿರ್ಧಾರ
ಆದರೆ ದರ್ಶನ್ ಅವರ ಮನವಿಗೆ ಜೈಲು ಆಡಳಿತ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಕೈದಿಗಳ ಭೇಟಿಗೆ ಸಂಬಂಧಿಸಿದ ನಿಯಮಾವಳಿಗಳು ಕಟ್ಟುನಿಟ್ಟಾಗಿರುವುದರಿಂದ, ವಿಶೇಷ ಭೇಟಿ ಅವಕಾಶ ನೀಡಬೇಕೇ ಬೇಡವೇ ಎಂಬ ಕುರಿತು ಕಾರಾಗೃಹದ ಹಿರಿಯ ಅಧಿಕಾರಿಗಳು ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

MUST WATCH : ಮಳೆಗೆ ಹಾರಿ ಹೋದ ಶಾಲೆಯ ಮೇಲ್ಚಾವಣಿ – ಹಾವೇರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ




