Darshan ಪತ್ನಿ ವಿಜಯಲಕ್ಷ್ಮಿಗೆ ಮತ್ತೆ ಕಿಡಿಗೇಡಿಗಳ ಕಾಟ – ಅಶ್ಲೀಲ ನಿಂದನೆ.

ನಟ Darshan ಅವರ ಪತ್ನಿ ವಿಜಯಲಕ್ಷ್ಮಿಗೆ ಸೋಶಿಯಲ್ ಮಿಡಿಯಾದಲ್ಲಿ ಮತ್ತೆ ಕಿಡಿಗೇಡಿಗಳ ಕಾಟ ಎದುರಾಗಿದೆ. ನಕಲಿ ಖಾತೆಗಳನ್ನು ಸೃಷ್ಟಿಸಿ ಅವಹೇಳನಕಾರಿ ಹಾಗೂ ಅಶ್ಲೀಲ ಕಾಮೆಂಟ್ಗಳನ್ನು ಮಾಡುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ. ಕೆಲವರು ‘ಜಲಗಾರ ಯೂನಿವರ್ಸಿಟಿ’ ಎಂಬ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದು ವಿಜಯಲಕ್ಷ್ಮಿ ಅವರನ್ನು ವೈಯಕ್ತಿಕವಾಗಿ ಗುರಿಯಾಗಿಸಿಕೊಂಡು ನಿಂದನೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸೋಶಿಯಲ್ ಮಿಡಿಯಾದಲ್ಲಿ ಟ್ರೋಲ್
ವಿಜಯಲಕ್ಷ್ಮಿ ಸಿನಿಮಾ ವೀಕ್ಷಣೆಗೆ ತೆರಳಿದ್ದ ವೇಳೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, ಆಕ್ಷೇಪಾರ್ಹ ರೀತಿಯಲ್ಲಿ ಪೋಸ್ಟ್ಗಳು ಹಾಗೂ ಕಾಮೆಂಟ್ಗಳನ್ನು ಮಾಡಲಾಗಿದೆ ಎಂದು ದೂರಲಾಗಿದೆ. ಅಲ್ಲದೆ ಅವರ ವೈಯಕ್ತಿಕ ಬದುಕು ಮತ್ತು ಕುಟುಂಬದ ವಿಚಾರಗಳನ್ನು ಎಳೆದು ತಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
ಇದನ್ನು ಓದಿ : ಪೊಲೀಸರ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅಸಮಾಧಾನ

Darshan ಪತ್ನಿ – ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಮನವಿ
ಈ ಹಿನ್ನೆಲೆ ಸೈಬರ್ ಕಿರುಕುಳಕ್ಕೆ ಕಡಿವಾಣ ಹಾಕುವಂತೆ ವಿಜಯಲಕ್ಷ್ಮಿ ಪೊಲೀಸ್ ಇಲಾಖೆಯ ನೆರವು ಕೋರಿದ್ದಾರೆ. ನಕಲಿ ಖಾತೆಗಳನ್ನು ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿನ ನಕಲಿ ಖಾತೆಗಳ ಮಾಹಿತಿ ಸಂಗ್ರಹಿಸುತ್ತಿದ್ದು, ಕಿರುಕುಳ ನೀಡಿರುವವರನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

ಸೈಬರ್ ಕಿರುಕುಳಕ್ಕೆ ಬ್ರೇಕ್ ಹಾಕುವಂತೆ ಪೊಲೀಸರ ಬಳಿ ವಿಜಯಲಕ್ಷ್ಮಿ ಮನವಿ ಮಾಡಿದ್ದು, ನಕಲಿ ಖಾತೆಗಳನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.
ಇದನ್ನು ನೋಡಿ : VVಯ ಪರೀಕ್ಷಾ ಕಾರ್ಯ ನಿರ್ವಹಣೆಯಲ್ಲಿ ಬ್ರಹ್ಮಾಂಡ ಭ್ರಷ್ಟಚಾರ – ಅವ್ಯವಹಾರದಲ್ಲಿ ಯಾರ್ಯಾರು ಪಾಲು..?





