
ಶಾಲಾ ಮಕ್ಕಳಿಗೆ Dasara Holiday ಘೋಷಣೆ; 19 ದಿನ ವಿರಾಮ; ಎಲ್ಲಿಂದ ಎಲ್ಲಿಯವರೆಗೂ? ಯಾವೆಲ್ಲಾ ಶಾಲೆಗಳಿಗೆ ಅನ್ವಯ?
ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. 2026-27ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯಂತೆ ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು 19 ದಿನಗಳ ದಸರಾ ರಜೆ ಘೋಷಿಸಲಾಗಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಪ್ರಸಕ್ತ ಸಾಲಿನಲ್ಲಿ ಶಾಲೆಗಳಿಗೆ ಒಟ್ಟು 119 ಸಾರ್ವತ್ರಿಕ ಹಾಗೂ ಸಾಂದರ್ಭಿಕ ರಜೆಗಳು ಇರಲಿದ್ದು, 245 ದಿನಗಳು ಶಾಲಾ ಕರ್ತವ್ಯದ ದಿನಗಳಾಗಿವೆ.
ಅಕ್ಟೋಬರ್ 2ರಂದು ಗಾಂಧಿ ಜಯಂತಿ ಆಚರಣೆ ಕಡ್ಡಾಯ
ಅಕ್ಟೋಬರ್ 2ರಂದು ಗಾಂಧಿ ಜಯಂತಿ ಇರುವ ಹಿನ್ನೆಲೆಯಲ್ಲಿ ಅಂದು ಸಾಮಾನ್ಯ ತರಗತಿಗಳು ನಡೆಯುವುದಿಲ್ಲ. ಆದರೆ, ರಾಜ್ಯದ ಶಾಲೆಗಳಲ್ಲಿ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸುವುದು ಕಡ್ಡಾಯವಾಗಿದೆ.
ಈ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಹಾಜರಾತಿಯೂ ಕಡ್ಡಾಯವಾಗಿರಲಿದೆ. ಗಾಂಧಿ ಜಯಂತಿ ಕಾರ್ಯಕ್ರಮ ಮುಕ್ತಾಯಗೊಂಡ ಬಳಿಕ ಅಕ್ಟೋಬರ್ 3ರಿಂದ ದಸರಾ ರಜೆ ಆರಂಭವಾಗಲಿದೆ.
READ THIS : ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್!

ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅನ್ವಯ
ಶಿಕ್ಷಣ ಇಲಾಖೆ ಪ್ರಕಟಿಸಿರುವ ಈ ರಜಾ ವೇಳಾಪಟ್ಟಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅನ್ವಯವಾಗಲಿದೆ. ಅನುದಾನರಹಿತ ಖಾಸಗಿ ಶಾಲೆಗಳು ತಮ್ಮದೇ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ದಸರಾ ರಜೆಯನ್ನು ನಿಗದಿಪಡಿಸಿಕೊಳ್ಳುತ್ತವೆ. ಹೀಗಾಗಿ ಕೆಲವು ಖಾಸಗಿ ಶಾಲೆಗಳು ಒಂದು ವಾರದ ರಜೆ ನೀಡಿದ್ದರೆ, ಇನ್ನು ಕೆಲವು ಶಾಲೆಗಳು 10 ದಿನಗಳವರೆಗೆ ರಜೆ ನೀಡುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ತಮ್ಮ ಶಾಲೆಯ ಅಧಿಕೃತ ವೇಳಾಪಟ್ಟಿಯನ್ನು ಪರಿಶೀಲಿಸುವುದು ಅಗತ್ಯ.
ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗೆ ಆಹ್ವಾನ
ಇದೇ ವೇಳೆ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ರಾಜ್ಯ ಸರ್ಕಾರ ಭರದ ಸಿದ್ಧತೆ ನಡೆಸುತ್ತಿದೆ. ಈ ವರ್ಷದ ನಾಡಹಬ್ಬ ಮೈಸೂರು ದಸರಾವನ್ನು ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರಿಂದ ಉದ್ಘಾಟಿಸಲು ಸರ್ಕಾರ ನಿರ್ಧರಿಸಿದೆ.

ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸ್ವಾಮೀಜಿಯವರಿಗೆ ದಸರಾ ಉದ್ಘಾಟನೆಗೆ ಆಹ್ವಾನ ಕಳುಹಿಸಿರುವುದಾಗಿ ತಿಳಿಸಿದರು.
ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ದಸರಾ ಉದ್ಘಾಟನೆಗೆ ನೀಡಿದ ಆಹ್ವಾನವನ್ನು ಅವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಧಾನಸಭೆಯಲ್ಲಿದ್ದ ಶಾಸಕರು ಹಾಗೂ ರಾಜ್ಯದ ಜನತೆ ಮೈಸೂರು ದಸರಾ ಉತ್ಸವದಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಆಹ್ವಾನ ನೀಡಿದರು.
MUST WATCH : ಹಾಸನ ಕಾರಾಗೃಕ್ಕೆ DGP ಅಲೋಕ್ ದಿಡೀರ್ ಭೇಟಿ – ಜೈಲ್ ಪರಿಶೀಲಿಸಿ ಅಧಿಕಾರಿಗಳಿಗೆ ಖಡಕ್ ಸೂಚನೆ




