Davanagere ಯ ರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಜಿಮ್ ಮುಗಿಸಿ ಮನೆಗೆ ಬಂದ ಬಳಿಕ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

Davanagere : ಜಿಮ್ನಲ್ಲಿ ವ್ಯಾಯಾಮ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ 26 ವರ್ಷದ ರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಕುಸಿದು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ನಡೆದಿದೆ. ಅಂತರರಾಷ್ಟ್ರೀಯ ಬಾಡಿ ಬಿಲ್ಡಿಂಗ್ ಸ್ಪರ್ಧೆಗೆ ಸಜ್ಜಾಗಿದ್ದ ಅವರು ರಾತ್ರಿ ತಲೆಸುತ್ತುತ್ತಿದೆ ಎಂದು ಹೇಳಿ ಏಕಾಏಕಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.
MUST READ : ಲಿವ್ ಇನ್ ಗೆಳತಿಯ ಕತ್ತು ಹಿಸುಕಿ ಕೊಂದ ಪ್ರಿಯಕರ!

ಪ್ರಾಥಮಿಕ ಮಾಹಿತಿ ಪ್ರಕಾರ, ಲೋ ಬಿಪಿ ಹಾಗೂ ಹೃದಯಾಘಾತವೇ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದಿದ್ದ ಸುಶೀಲ್, ಯುವಕರಿಗೆ ಫಿಟ್ನೆಸ್ ತರಬೇತಿ ನೀಡುವ ಮೂಲಕ ಅನೇಕರಿಗೆ ಪ್ರೇರಣೆಯಾಗಿದ್ದರು
. ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಸ್ನೇಹಿತರು ಮತ್ತು ಕ್ರೀಡಾ ವಲಯದಲ್ಲಿ ತೀವ್ರ ಶೋಕ ಮನೆ ಮಾಡಿದೆ.
MUST WATCH : ನಿರ್ಮಾಣ ಹಂತದ ಕ್ರೀಡಾಂಗಣದಲ್ಲಿ ದುರಂತ ಲಿಫ್ಟ್ ನ ಗುಂಡಿಗೆ ಬಿದ್ದು ಪುಟ್ಟ ಕಂದಮ್ಮ ಸಾ**




