ನಾಳೆ CM ಸಿದ್ದರಾಮಯ್ಯ ರಾಜೀನಾಮೆ.? ರಾಮನಗರದಲ್ಲಿ ಡಿಕೆಶಿ ಕಾರ್ಯಕರ್ತರ ಸಂಭ್ರಮ.

ರಾಜ್ಯ ರಾಜಕಾರಣದಲ್ಲಿ ನಾಳೆ ಒಂದು ಅತ್ಯಂತ ಪ್ರಮುಖ ಹಾಗೂ ಬಹುದೊಡ್ಡ ತಿರುವು ಸಿಗುವ ಸಾಧ್ಯತೆ ದಟ್ಟವಾಗಿದೆ. ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ರಾಜಕೀಯ ವಿದ್ಯಮಾನಗಳು ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ?
ನಾಳೆ ಬೆಳಿಗ್ಗೆ 10:30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ, ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗ್ತಿದೆ.
ಇದನ್ನು ಓದಿ : ನಾಯಕತ್ವ ಬದಲಾವಣೆ ಚರ್ಚೆ – “ Yathindra ಹೇಳಿದ ಮೇಲೆ ಮುಗೀತು” – ಡಿಕೆಶಿ ಟಾಂಗ್..!!

ರಾಮನಗರ ಜಿಲ್ಲೆಯಲ್ಲಿ ಹಬ್ಬದ ವಾತಾವರಣ
ಇನ್ನು ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಮಹತ್ವದ ಚರ್ಚೆಗಳು ನಡೆದಿದ್ದು, ಡಿ.ಕೆ. ಶಿವಕುಮಾರ್ ಅವರ ಹೆಸರೇ ಅಂತಿಮವಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಸುದ್ದಿಯಿಂದ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ.

ಈ ಸುದ್ದಿ ಹರಡುತ್ತಿದ್ದಂತೆ ಇಡೀರಾಮನಗರ ಜಿಲ್ಲೆ ಹಬ್ಬದ ವಾತಾವರಣದಂತೆ ಕಂಗೊಳಿಸುತ್ತಿದೆ. ರಾಮನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಡಿಕೆಶಿ ಅಭಿಮಾನಿಗಳು ಸಂಭ್ರಮಾಚರಣೆ ಆರಂಭಿಸಿದ್ದಾರೆ. ರಾಮನಗರದ ಪ್ರಮುಖ ವೃತ್ತಗಳಲ್ಲಿ ಜಮಾಯಿಸಿದ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿಕೊಂಡು, ಪಟಾಕಿ ಸಿಡಿಸಿ ಸಂಭ್ರಮಿಸಿದರು.
‘ಮುಂದಿನ CM ಡಿಕೆಶಿ’ ಘೋಷಣೆಗಳ ಅಬ್ಬರ
ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾರ್ಯಕರ್ತರು ಡಿ.ಕೆ. ಶಿವಕುಮಾರ್ ಅವರ ಪರವಾಗಿ ಜೈಕಾರಗಳನ್ನು ಹಾಕಿದರು. “ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್” ಎಂದು ದೊಡ್ಡ ಧ್ವನಿಯಲ್ಲಿ ಘೋಷಣೆಗಳನ್ನು ಕೂಗುತ್ತಾ ತಮ್ಮ ನೆಚ್ಚಿನ ನಾಯಕನಿಗೆ ಬೆಂಬಲ ಸೂಚಿಸಿದರು.

ಇದನ್ನು ನೋಡಿ : CM ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೀಗ್ಯಾಕಂದ್ರು ?



