DCM ಡಾ.ಜಿ.ಪರಮೇಶ್ವರ್ ಅವರು ದಂಪತಿ ಸಮೇತ ಇಂದು ಬೆಳಗ್ಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ದಂಪತಿ ಸಮೇತ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.
ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವ
ಪೂಜೆ ಬಳಿಕ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ DCM ಪರಮೇಶ್ವರ್ ಅವರಿಗೆ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ವೇಳೆ ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತರ ಅನುಕೂಲಕ್ಕಾಗಿ ಹಲವು ಮಹತ್ವದ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಇದನ್ನು ಓದಿ : ರೈತರನ್ನು ಒಕ್ಕಲೆಬ್ಬಿಸಿ ಯೋಜನೆ ಮಾಡುವುದಿಲ್ಲ ಎಂದ ಡಿಸಿಎಂ ಡಾ.G Parameshwara..!!

ಮೂಲಭೂತ ಸೌಕರ್ಯ ನೀಡುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ತಯಾರಿ
ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ದರ್ಶನ ವ್ಯವಸ್ಥೆ, ಪಾರ್ಕಿಂಗ್, ವಸತಿ ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ಸಮಗ್ರ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.
ಒತ್ತುವರಿಯಾಗಿರುವ ಎಲ್ಲಾ ಜಮೀನನ್ನು ತೆರವುಗೊಳಿಸಲು DCM ಸೂಚನೆ
ಮುಜರಾಯಿ ಇಲಾಖೆಯ ದೇವಸ್ಥಾನಗಳಿಗೆ ಸಂಬಂಧಿಸಿ ಒತ್ತುವರಿಯಾಗಿರುವ ಎಲ್ಲಾ ಜಮೀನನ್ನು ತೆರವುಗೊಳಿಸಲು ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಅದೇ ರೀತಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನು ನೋಡಿ : ಶಿರಾದಲ್ಲಿ ಫಲ್ಸ್ ಪೋಲಿಯೋ ಅಭಿಯಾನ – ಪೋಷಕರಿಗೆ ಕರೆ ಕೊಟ್ಟ ಶಾಸಕ JAYACHANDRA




