ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ ಅವರಿಂದಲೂ ಅಭಿವೃದ್ಧಿ ಅಸಾಧ್ಯ: ಬಿಜೆಪಿ ರಾಜ್ಯಾಧ್ಯಕ್ಷ B.Y Vijayendra ಭವಿಷ್ಯ.

ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದ ಪರಿಣಾಮ ಒಂದು ಕಡೆ ಆಗುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸ ನಡೆಯುತ್ತಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.
“ಅಧಿಕಾರದ ಮದ ನೆತ್ತಿಗೇರಿದಾಗ ಇಂತಹ ನಡೆಗಳು ನಡೆಯುತ್ತವೆ”
ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ ಅವರು, “ಅಧಿಕಾರದ ಮದ ನೆತ್ತಿಗೇರಿದಾಗ ಇಂತಹ ನಡೆಗಳು ನಡೆಯುತ್ತವೆ” ಎಂದು ಹೇಳಿದ್ದು, ಆಳಂದದಲ್ಲಿ ಕೇಸುಗಳನ್ನು ಹಿಂಪಡೆದಿರುವ ವಿಚಾರವನ್ನು ಉಲ್ಲೇಖಿಸಿ ಅದರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿಸಿದರು.
ಇದನ್ನು ಓದಿ : ಸಿಎಂ ಬದಲಾವಣೆ ಬಳಿಕವೂ ಉತ್ತಮ ಆಡಳಿತದ ನಂಬಿಕೆ ಇಲ್ಲ – BY Vijayendra ಟೀಕೆ..!!

ಕಳೆದ ಮೂರು ವರ್ಷಗಳಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿಲ್ಲ
ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ ಅವರು, ಕಳೆದ ಮೂರು ವರ್ಷಗಳಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದು ಆರೋಪಿಸಿದರು. ಭ್ರಷ್ಟಾಚಾರ ಮತ್ತು ಅಲ್ಪಸಂಖ್ಯಾತರ ಓಲೈಕೆ ಹೊರತುಪಡಿಸಿ ಯಾವುದೇ ಪ್ರಮುಖ ಸಾಧನೆ ಆಗಿಲ್ಲ ಎಂದು ಹೇಳಿದ ವಿಜಯೇಂದ್ರ, ಸರ್ಕಾರದ ಗ್ಯಾರಂಟಿ ಯೋಜನೆಗಳ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತಿದೆ ಎಂದರು. ಅನುದಾನದ ಕೊರತೆಯೂ ಅಭಿವೃದ್ಧಿಗೆ ತೊಂದರೆ ಉಂಟುಮಾಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.
ಅವ್ರು ಮೊದಲು ಪ್ರಮಾಣವಚನ ಸ್ವೀಕರಿಸಲಿ
ಡಿ.ಕೆ. ಶಿವಕುಮಾರ್ ಅವರ ನಾಯಕತ್ವದ ಕುರಿತು ಪ್ರತಿಕ್ರಿಯಿಸಿದ Vijayendra , ಅವರು ಮೊದಲು ಪ್ರಮಾಣವಚನ ಸ್ವೀಕರಿಸಲಿ ಎಂದು ವ್ಯಂಗ್ಯವಾಡಿದರು. ಬಿಜೆಪಿಯನ್ನು ಎದುರಿಸಲು ಪಕ್ಷ ಸಿದ್ಧವಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನು ನೋಡಿ : ಅಭಿಮಾನಿಗಳಿಗೆ ಖಾಕಿ ಶಾಕ್ – ನಿಯಮ ಉಲ್ಲಂಘಿಸಿದವರಿಗೆ ಬಿತ್ತು ಫೈನ್



