Dharwad ದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆಯುತ್ತಿದ್ದ 25 ವರ್ಷದ ಯುವಕ ಮಾರುತಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಯುವಕ ಕಳೆದ ಮೂರು ವರ್ಷಗಳಿಂದ ಧಾರವಾಡದಲ್ಲಿ ವಾಸವಾಗಿದ್ದ.

Dharwad ದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ಮೂಲದ 25 ವರ್ಷದ ಮಾರುತಿ ಮೃತ ದುರ್ದೈವಿ. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ಧಾರವಾಡದಲ್ಲೇ ವಾಸವಿದ್ದು ವಿವಿಧ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದರು.
MUST READ : KPCC ಅಧ್ಯಕ್ಷ ಸ್ಥಾನಕ್ಕೆ BK Hariprasad ಹೆಸರು ಫೈನಲ್…?
ನಗರದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದ ಮಾರುತಿಗೆ ಮಂಗಳವಾರ ರಾತ್ರಿ ತಮ್ಮ ಕೊಠಡಿಯಲ್ಲೇ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ. ಆರೋಗ್ಯದಲ್ಲಿ ಏಕಾಏಕಿ ಉಂಟಾದ ಸಮಸ್ಯೆಯಿಂದ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳ ಕನಸು ಹೊತ್ತು ಧಾರವಾಡಕ್ಕೆ ಬಂದಿದ್ದ ಯುವಕನ ಅಕಾಲಿಕ ನಿಧನ ಕುಟುಂಬಸ್ಥರು, ಸ್ನೇಹಿತರು ಹಾಗೂ ಸಹಪಾಠಿಗಳಲ್ಲಿ ತೀವ್ರ ದುಃಖ ಮೂಡಿಸಿದೆ.
MUST WATCH : ಡಾ.ಜಿ ಪರಮೇಶ್ವರ್ಗೆ ಬಂಪರ್ ಆಫರ್ – ಎರಡನೇ ಬಾರಿ DCM ಆದPARAM | BENGALURU NEWS |




