
9 ನೇ ತರಗತಿ ವಿದ್ಯಾರ್ಥಿನಿಯಿಂದ ದುಡುಕಿನ ನಿರ್ಧಾರ!
9ನೇ ತರಗತಿ ವಿದ್ಯಾರ್ಥಿನಿಯೋರ್ವಳು ದುಡುಕಿನ ನಿರ್ಧಾರ ತೆಗೆದುಕೊಂಡು, Suicide ಮಾಡಿಕೊಂಡಿರುವ ದಾರುಣ ಘಟನೆ ಶಿವಮೊಗ್ಗ ನಗರದ ಗೋಪಿಸೆಟ್ಟಿಕೊಪ್ಪದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸೃಷ್ಟಿ ಎಂದು ಗುರುತಿಸಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!
ನೆನ್ನೆ ಭಾನುವಾರವಾಗಿದ್ದರಿಂದ ಸೃಷ್ಟಿಯನ್ನು ಮನೆಯಲ್ಲಿಯೇ ಬಿಟ್ಟು ತಂದೆ ತಾಯಿ ಇಬ್ಬರೂ ರಾಯರ ಆರಾಧನೆಗೆ ತೆರಳಿದ್ದರು. ಪೂಜೆ ಮುಗಿಸಿ ಮನೆಗೆ ಬಂದಾಗ ಸೃಷ್ಟಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೋಷಕರು ತೀವ್ರ ಆಘಾತಕ್ಕೊಳಗಾಗಿದ್ದಾರೆ.

READ THIS : ಸೆಲ್ಫಿ ವೀಡಿಯೋ ಮಾಡಿಟ್ಟು ಬ್ಯಾಂಕ್ ಸಿಬ್ಬಂದಿ ಆತ್ಮಹತ್ಯೆ!
ಓದಿನ ವಿಚಾರವೇ 9 ನೇ ವಿದ್ಯಾರ್ಥಿನಿ ಸಾವಿಗೆ ಕಾರಣಾನಾ?
ಇನ್ನು ವಿದ್ಯಾರ್ಥಿನಿ ಸಾವಿಗೂ ಮುನ್ನ ಡೆತ್ನೋಟ್ ಬರೆದಿದ್ದು, ಪೋಷಕರು ಓದು ಓದು ಎಂದು ಪದೇ ಪದೆ ಹೇಳುತ್ತಿದ್ದಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಉಲ್ಲೇಖಿಸಿರುವುದಾಗಿ ಪ್ರಾಥಮಿಕವಾಗಿ ತಿಳಿದುಬಂದಿದೆ.
ಆದರೆ, ಘಟನೆಯ ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

MUST WATCH : ಸಿಂಹ ನಡಿಗೆ 2026ಕ್ಕೆ ಭರ್ಜರಿ ಚಾಲನೆ ಸಚಿವ ಶಿವಲಿಂಗೇಗೌಡರಿಂದ ಹಸಿರು ನಿಶಾನೆ




