Home Work ಮಾಡದಿದ್ದಕ್ಕೆ ಶಿಕ್ಷಕಿ ಹಲ್ಲೆ – ಕುಸಿದುಬಿದ್ದು ವಿದ್ಯಾರ್ಥಿ ಸಾವು

ಹೋಂ ವರ್ಕ್ ಮಾಡದಿದ್ದಕ್ಕೆ ಶಿಕ್ಷಕಿ ಹಲ್ಲೆ ನಡೆಸಿದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ವಿಶಾಖಪಟ್ಟಣಂನ ಖಾಸಗಿ ಶಾಲೆಯಲ್ಲಿ ನಡೆದಿದೆ.
ಒಂದೇ ತಪ್ಪಿಗೆ ಕಂದಮ್ಮನ ಜೀವ ಬಲಿಯಾಯಿತೇ?
ಮೃತ ವಿದ್ಯಾರ್ಥಿಯನ್ನು ತೇಜ ಎಂದು ಗುರುತಿಸಲಾಗಿದೆ. ಶಿಕ್ಷಕಿ ಕೋಲಿನಿಂದ ಹೊಡೆದ ಬಳಿಕ ತೇಜ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಕಿಂಗ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
READ THIS : ತುಮಕೂರು ಕೋರ್ಟ್ ಆವರಣದಲ್ಲೇ ಹಿರಿಯ ವಕೀಲನ ಮೇಲೆ ಹಲ್ಲೆ!

ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ
ಘಟನೆ ಕುರಿತು ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ತೇಜನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಸಂಬಂಧಿಕರು ಆಸ್ಪತ್ರೆಗೆ ಧಾವಿಸಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಸೂಕ್ಷ್ಮವಾಗಿ ವರ್ತಿಸುವುಸು ಅಗತ್ಯ
ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸೂಕ್ಷ್ಮವಾಗಿ, ಜವಾಬ್ದಾರಿಯುತವಾಗಿ ಮತ್ತು ಮಾನವೀಯತೆಯಿಂದ ವರ್ತಿಸುವಂತೆ ಅಗತ್ಯ ಸಂವೇದನಾಶೀಲ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

MUST WATCH : ತುಮಕೂರಲ್ಲಿ ಮುಂದುವರಿದ JCB ಘರ್ಜನೆ – 8ನೇ ದಿನವೂ ಭರ್ಜರಿ ಕಾರ್ಯಾಚರಣೆ




