ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ನಲ್ಲಿ KS Eshwarappa ಗೆ ಸಂಕಷ್ಟ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಕೇಸ್
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ KS Eshwarappa ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣವನ್ನು ರದ್ದುಪಡಿಸುವಂತೆ ಅವರು ಕೋರಿದ್ದ ಮನವಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ವಜಾಗೊಳಿಸಿದೆ.

ಈಶ್ವರಪ್ಪಗೆ ಹೈಕೋರ್ಟ್ನಲ್ಲಿ ಹಿನ್ನಡೆ
ಈಶ್ವರಪ್ಪ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದರೆ, ಲೋಕಾಯುಕ್ತ ಪರ ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟೇಶ್ ಅರಬಟ್ಟಿ ಪ್ರತಿವಾದ ಮಂಡಿಸಿದರು. ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಲೋಕಾಯುಕ್ತ ಪರವಾಗಿ ನ್ಯಾಯಾಲಯಕ್ಕೆ ತಿಳಿಸಲಾಯಿತು.
ಇದನ್ನು ಓದಿ : ರಾಜ್ಯದ ಹಲವೆಡೆ ಮಳೆ ಕೊರತೆ – ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಮರು ತನಿಖೆಗೆ ನ್ಯಾಯಾಲಯದ ಆದೇಶ
ಶಿವಮೊಗ್ಗ ಮೂಲದ ವಕೀಲ ಬಿ. ವಿನೋದ್ ಅವರು ಕೆ.ಎಸ್. ಈಶ್ವರಪ್ಪ, ಪುತ್ರ ಕೆ.ಇ. ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಮಾಡಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಆರಂಭದಲ್ಲಿ ಲೋಕಾಯುಕ್ತ ಪೊಲೀಸರು ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಆದರೆ ದೂರುದಾರರು ಅದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋದ ಬಳಿಕ, ಪ್ರಕರಣದ ಮರು ತನಿಖೆಗೆ ನ್ಯಾಯಾಲಯ ಆದೇಶಿಸಿತ್ತು.
ಹೈಕೋರ್ಟ್ ಅರ್ಜಿ ವಜಾ
ತದನಂತರ ನ್ಯಾಯಾಲಯವು ಮರು ತನಿಖೆ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಆ ಆದೇಶ ಆಧರಿಸಿ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಹೊಸದಾಗಿ ಎಫ್ಐಆರ್ ದಾಖಲಿಸಿದ್ದರು. ತದನಂತರ ಈಶ್ವರಪ್ಪನವರು ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಹೈಕೋರ್ಟ್ ಅರ್ಜಿಯನ್ನು ವಜಾ ಮಾಡಿದೆ.

ಇದನ್ನು ನೋಡಿ : LINK CANALಗೆ CONGRESS ಶಾಸಕರೇ ವಿರೋಧ – ಸರ್ಕಾರದ ತೀರ್ಮಾನ ಯಾರು ತಡೆಯಲು ಆಗಲ್ಲ




