ಮೂರು ದಿನಗಳ ಮೌನದ ಬಳಿಕ DK Shivakumar ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕಾಂಗ ಪಕ್ಷದ ಸಭೆ, ಸಿಎಂ ಆಯ್ಕೆ ಮತ್ತು ಸರ್ಕಾರ ರಚನೆ ಕುರಿತು ನೀಡಿದ ಪ್ರಮುಖ ಮಾಹಿತಿಯ ಸಂಪೂರ್ಣ ವಿವರ ಇಲ್ಲಿದೆ.

ಕಳೆದ ಮೂರು ದಿನಗಳಿಂದ ಮೌನವಾಗಿದ್ದ DK Shivakumar ಇದೀಗ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿಯಾದ ಬಳಿಕ ಅವರು ಸರ್ಕಾರ ರಚನೆ ಮತ್ತು ಶಾಸಕಾಂಗ ಪಕ್ಷದ ಸಭೆ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡರು.
ನಾಳೆ ಶಾಸಕಾಂಗ ಪಕ್ಷದ ಸಭೆ
ಡಿಕೆ ಶಿವಕುಮಾರ್ ತಿಳಿಸಿದಂತೆ, ನಾಳೆ ಸಂಜೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.ಎಲ್ಲ ಶಾಸಕರಿಗೂ ಬೆಂಗಳೂರಿನಲ್ಲೇ ಇರಲು ಸೂಚನೆ ನೀಡಲಾಗಿದೆ. ಹೈಕಮಾಂಡ್ ನಾಯಕರ ಸೂಚನೆಯ ಮೇರೆಗೆ ಸಭೆಯ ಸಮಯ ಅಂತಿಮಗೊಳ್ಳಲಿದೆ.
MUST READ : Siddaramaiah ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್..!!

ಮೊದಲಿಗೆ ಶಾಸಕಾಂಗ ಪಕ್ಷದ ನಾಯಕ ಆಯ್ಕೆ
ಮೊದಲು ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.ಅದರ ಬಳಿಕವೇ ಸಚಿವ ಸಂಪುಟ ರಚನೆ , ಪ್ರಮಾಣವಚನ ದಿನಾಂಕ ಸರ್ಕಾರದ ಮುಂದಿನ ಕ್ರಮಗಳು ಇವುಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪ್ರಮಾಣವಚನ ಕುರಿತು ಮೌನ
ಸದ್ಯಕ್ಕೆ ಪ್ರಮಾಣವಚನ ಸ್ವೀಕಾರದ ದಿನಾಂಕ ಅಥವಾ ಸಚಿವ ಸಂಪುಟದ ಕುರಿತು ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. “ಎಲ್ಲವನ್ನೂ ಹಂತ ಹಂತವಾಗಿ ನಡೆಸಲಾಗುತ್ತದೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಖರ್ಗೆ ಭೇಟಿಯಾದ ಡಿಕೆಶಿ
ಇಂದು ಡಿಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದರು.
ಈ ವೇಳೆ:
- ಖರ್ಗೆಯವರ ಆಶೀರ್ವಾದ ಪಡೆದರು
- ಕಾಲಿಗೆ ಬಿದ್ದು ಗೌರವ ಸೂಚಿಸಿದರು
ಈ ಬೆಳವಣಿಗೆ ಕಾಂಗ್ರೆಸ್ ಒಳರಾಜಕೀಯದಲ್ಲಿ ಮಹತ್ವ ಪಡೆದುಕೊಂಡಿದೆ.
MUST WATCH : ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ಇನ್ನಿಲ್ಲ




