CM ಸ್ಥಾನಕ್ಕೆ ಸಿದ್ದರಾಮಯ್ಯ ಇಂದು ರಾಜೀನಾಮೆ – ಕಾವೇರಿ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್

ಅಹಿಂದ ನಾಯಕ ಸಿದ್ದರಾಮಯ್ಯ ಅವರ ರಾಜಕೀಯ ಬದುಕಿನ ಮಹತ್ವದ ಅಧ್ಯಾಯಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಹೆಚ್ಚಾಗಿದೆ. ಕಾಂಗ್ರೆಸ್ನಲ್ಲಿ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದು, ಕಳೆದ ಎರಡು ದಿನಗಳಿಂದ ರಾಜ್ಯ ಕಾಂಗ್ರೆಸ್ನಲ್ಲಿ ನಡೆದಿರುವ ಬಿರುಸಿನ ರಾಜಕೀಯ ಬೆಳವಣಿಗೆಗಳು ಇದೀಗ ನಿರ್ಣಾಯಕ ಹಂತ ತಲುಪಿವೆ.

ಸಿದ್ದರಾಮಯ್ಯರವರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆಶಿ!
ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯ ಕೇಳಿರುವ ಸಿದ್ದರಾಮಯ್ಯ, ಇಂದು ಬೆಳಗ್ಗೆ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಮಹತ್ವದ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ.
ಇನ್ನು ಬ್ರೇಕ್ಫಾಸ್ಟ್ ಮೀಟಿಂಗ್ ವೇಳೆ CM ಸಿದ್ದರಾಮಯ್ಯರನ್ನ ಡಿಕೆ ಶಿವಕುಮಾರ್ ತಬ್ಬಿಕೊಂಡು ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಬಳಿಕ ಇಬ್ಬರು ನಾಯಕರು ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ
ಇನ್ನು ಮಂತ್ರಿಗಳ ಜೊತೆಗಿನ ಬ್ರೇಕ್ ಫಾಸ್ಟ್ ಮೀಟಿಂಗ್ನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ಹೇಳುವುದನ್ನ ಪಾಲನೆ ಮಾಡುವುದು ನನ್ನ ಕರ್ತವ್ಯ.
ಹೈಕಮಾಂಡ್ಗೆ ಕೊಟ್ಟ ಮಾತಿಗೆ ನಾನು ಬದ್ಧನಾಗಿರುತ್ತೇನೆ ಎಂದಿದ್ದು, ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್ಫಾಸ್ಟ್ನಲ್ಲಿ ನುಡಿದಿದ್ದಾರೆ ಎನ್ನಲಾಗಿದೆ.

ಮುಂದಿನ CM ಯಾರು?
ಇನ್ನು ಸಿದ್ದರಾಮಯ್ಯ ರಾಜೀನಾಮೆ ಬಳಿಕ ಇಂದು ಸಂಜೆ ಅಥವಾ ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯುವ ಸಾಧ್ಯತೆ ಇದೆ.
ಮುಂದಿನ ಸಿಎಂ ಯಾರು ಎಂಬ ಹೆಸರನ್ನ ಹೇಳದ ಸಿದ್ದರಾಮಯ್ಯ, ಮುಂದೆ ಸಿಎಂ ಯಾರು ಆಗ್ತಾರೆ ಎನ್ನುವುದನ್ನು ಹೈಕಮಾಂಡ್ ಹೇಳಲಿದೆ.ಹೈಕಮಾಂಡ್ ನಾಯಕರು ನಾವು ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ : CM ರಾಜೀನಾಮೆ ವದಂತಿ ನಡುವೆ Siddaramaiah ಟ್ವೀಟ್..!!

ಬ್ರೇಕ್ಫಾಸ್ಟ್ ಮೀಟಿಂಗ್ ಹಲವು ಸಚಿವರು, ಮುಖಂಡರು ಭಾಗಿ
ಇನ್ನು ಬ್ರೇಕ್ಫಾಸ್ಟ್ ಮೀಟಿಂಗ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ, ಪರಮೇಶ್ವರ್, ಭೈರತಿ ಸುರೇಶ್, ಸಂತೋಷ್ ಲಾಡ್, ಎಂಸಿ ಸುಧಾಕರ್, ಎಂಬಿ ಪಾಟೀಲ್, ಪ್ರಿಯಾಂಕ್ ಖರ್ಗೆ, ಕೆಜೆ ಜಾರ್ಜ್, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೋಳಿ, ಮಹದೇವಪ್ಪ ಸೇರಿದಂತೆ ಹಲವು ಸಚಿವರು ಮತ್ತು ಮುಖಂಡರು ಭಾಗಿಯಾಗಿದ್ದಾರೆ.

ಇದನ್ನು ನೋಡಿ : BAKRIDಗೆ ಮುಸ್ಲಿಂರ ಮಹತ್ವದ ನಿರ್ಧಾರ – ಗೋ ಖರೀದಿ-ಬಲಿ ಸಂಪೂರ್ಣ ಬಹಿಷ್ಕಾರ..!




