ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು DK Shivakumar ಮಹತ್ವದ ಸುಳಿವು ನೀಡಿದ್ದಾರೆ. ಹೊಸಬರಿಗೆ ಅವಕಾಶ ನೀಡುವ ಆಲೋಚನೆ ಪ್ರಗತಿಯಲ್ಲಿದ್ದು, ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್ ಕೈಯಲ್ಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಕುರಿತು ಉಪ ಮುಖ್ಯಮಂತ್ರಿ DK Shivakumar ಮಹತ್ವದ ಹೇಳಿಕೆ ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ನಡೆಯುತ್ತಿರುವ ಊಹಾಪೋಹಗಳ ನಡುವೆ,
ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

ಹೊಸಬರಿಗೆ ಅವಕಾಶ ನೀಡುವ ಆಲೋಚನೆ
ಬೆಂಗಳೂರಿನ ಶಿವಾನಂದ ಸರ್ಕಲ್ ಸಮೀಪದ ತಮ್ಮ ಸರ್ಕಾರಿ ನಿವಾಸದಲ್ಲಿ ದರ್ಗಾದ ಧರ್ಮಗುರುಗಳೊಂದಿಗೆ ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್,
ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡುವ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
ಅಲ್ಲದೆ, “ನಾನು ಯಾರ ಪ್ರಗತಿ ಅಥವಾ ಅವಕಾಶವನ್ನು ತಡೆಯಲು ಬಯಸುವುದಿಲ್ಲ. ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎಂಬುದು ನಮ್ಮ ಆಶಯ” ಎಂದು ಅವರು ಸ್ಪಷ್ಟಪಡಿಸಿದರು.
MUST READ : ವಚನಾನಂದ ಶ್ರೀಗಳ ವಿರುದ್ಧ POCSO ಪ್ರಕರಣ – ಇಂದು ಹೈಕೋರ್ಟ್ನಲ್ಲಿ ಜಾಮೀನು ಭವಿಷ್ಯ ನಿರ್ಧಾರ..!!

ಹೈಕಮಾಂಡ್ ಕೈಯಲ್ಲಿ ಅಂತಿಮ ನಿರ್ಧಾರ
ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ, ಈ ವಿಚಾರದ ಸಂಪೂರ್ಣ ಜವಾಬ್ದಾರಿ ಪಕ್ಷದ ಹೈಕಮಾಂಡ್ ಬಳಿ ಇದೆ ಎಂದು ಹೇಳಿದರು.
ಇದೀಗ ನವದೆಹಲಿಯಲ್ಲಿ ಪಕ್ಷದ ವರಿಷ್ಠರ ಮಟ್ಟದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿದ್ದು, ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ರಾಜಕೀಯ ವಲಯದಲ್ಲಿ ಹೆಚ್ಚಿದ ಕುತೂಹಲ
ಡಿ.ಕೆ. ಶಿವಕುಮಾರ್ ಅವರ ಈ ಹೇಳಿಕೆ ಸಚಿವ ಸ್ಥಾನಾಕಾಂಕ್ಷಿಗಳಲ್ಲಿ ಹೊಸ ನಿರೀಕ್ಷೆ ಹುಟ್ಟಿಸಿದೆ. ಜೊತೆಗೆ, ಸಂಪುಟ ಪುನಾರಚನೆ ಅಥವಾ ವಿಸ್ತರಣೆಯ ಮೂಲಕ ಹೊಸ ಮುಖಗಳಿಗೆ ಅವಕಾಶ ಸಿಗಬಹುದೇ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ.
ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ಕೆಲವು ದಿನಗಳಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೇಜರ್ ಸರ್ಜರಿಗೆ ವೇದಿಕೆ ಸಿದ್ಧವೇ?
ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಮಾಡುವ ಕುರಿತು ಕಳೆದ ಕೆಲವು ವಾರಗಳಿಂದ ನಿರಂತರ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಡಿಸಿಎಂ ನೀಡಿರುವ ಹೇಳಿಕೆ, ಸಂಪುಟದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಿಗೆ ವೇದಿಕೆ ಸಿದ್ಧವಾಗುತ್ತಿರುವ ಸೂಚನೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.
ಆದರೆ, ಅಂತಿಮ ತೀರ್ಮಾನ ಕಾಂಗ್ರೆಸ್ ಹೈಕಮಾಂಡ್ ಕೈಯಲ್ಲಿರುವುದರಿಂದ ಅಧಿಕೃತ ಘೋಷಣೆಗಾಗಿ ಇನ್ನೂ ಕಾಯಬೇಕಾಗಿದೆ.
MUST WATCH : ಅಬ್ಬಬ್ಬಾ.. ಅಂಗಡಿ ಮುಂದೆ ಜನವೋ ಜನ – ಒಂದು ರೂ.ಟೀ ಶರ್ಟ್ ಗೆ ಮುಗಿಬಿದ್ದ ಜನರು | CHIKKABALLAPURA NEWS |




