ಪ್ರಮಾಣವಚನ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಸಿದ್ದರಾಮಯ್ಯಗೆ ಆಹ್ವಾನ ನೀಡಿದ DK ಶಿವಕುಮಾರ್

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರು ತಮ್ಮ ಪದಗ್ರಹಣ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಹ್ವಾನಿಸಿದರು.

ಸಿದ್ದುಗೆ ಅಧಿಕೃತ ಆಹ್ವಾನ ನೀಡಿದ ಡಿಕೆ
ಇಂದು ಬೆಳಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಉಪಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿರುವ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್, ಆಹ್ವಾನ ಪತ್ರಿಕೆ ನೀಡಿ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆತ್ಮೀಯವಾಗಿ ಕೋರಿದರು.

BSY ಗೂ ಕೂಡ ಆತ್ಮೀಯ ಆಮಂತ್ರಣ
ಇನ್ನು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಕೂಡ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ಇಂದು ಬೆಳಗ್ಗೆ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಡಾಲರ್ಸ್ ಕಾಲೋನಿಯಲ್ಲಿರುವ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ತೆರಳಿದ ಡಿ.ಕೆ. ಶಿವಕುಮಾರ್, ಆಹ್ವಾನ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆತ್ಮೀಯವಾಗಿ ಆಮಂತ್ರಿಸಿದರು.
ಇದನ್ನು ಓದಿ : CM ಸ್ಥಾನ ಬಿಟ್ಟುಕೊಟ್ಟ ಸಿದ್ದುಗೆ ಹೈಕಮಾಂಡ್ನಿಂದ ಮಹತ್ವದ ಜವಾಬ್ದಾರಿ

ಹೆಚ್.ಡಿ. ದೇವೇಗೌಡರ ಮನೆಗೆ DK ಭೇಟಿ
ಇದೀಗ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮನೆಗೆ ಡಿಕೆಶಿ ಭೇಟಿ ನೀಡಿ ಅವರನ್ನೂ ಆಹ್ವಾನಿಸಲಾಗುವುದು ಎಂದು ತಿಳಿಸಿದ್ದಾರೆ.
ಇಂದು ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ DK ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇದನ್ನು ನೋಡಿ : ನನಗೂ ಸಚಿವ ಸ್ಥಾನ ಕೊಡಿ ಎಂದ ಶಾಸಕ ಬಹಿರಂಗವಾಗಿ ಆಸೆ ಬಿಚ್ಚಿಟ್ಟ ಹೆಚ್.ವಿ ವೆಂಕಟೇಶ್




