ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಳಿಕ ಮುಖ್ಯಮಂತ್ರಿ DK Shivakumar ಪತ್ನಿ ಉಷಾ ಅವರೊಂದಿಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ DK Shivakumar ಅವರು ಕುಟುಂಬ ಸಮೇತರಾಗಿ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಪತ್ನಿ ಉಷಾ ಅವರೊಂದಿಗೆ ತಿರುಪತಿ ದರ್ಶನ
ಶುಕ್ರವಾರ ಮುಂಜಾನೆ ಡಿ.ಕೆ. ಶಿವಕುಮಾರ್ ಅವರು ಪತ್ನಿ ಉಷಾ ಶಿವಕುಮಾರ್ ಅವರೊಂದಿಗೆ ತಿರುಮಲ ದೇವಸ್ಥಾನಕ್ಕೆ ತೆರಳಿ ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದರು.
ದೇವರ ಸನ್ನಿಧಿಯಲ್ಲಿ ರಾಜ್ಯದ ಅಭಿವೃದ್ಧಿ, ಜನರ ಸುಖ-ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ
ತಿರುಪತಿ ದರ್ಶನದ ಬಳಿಕ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ಡಿಕೆ ಶಿವಕುಮಾರ್, “ಧರ್ಮಪತ್ನಿಯೊಂದಿಗೆ ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದು ನಾಡಿನ ಒಳಿತಿಗಾಗಿ ಪ್ರಾರ್ಥಿಸಿದ್ದೇನೆ.
ಜಗದೋದ್ಧಾರಕ ಶ್ರೀನಿವಾಸನ ಅನುಗ್ರಹ ಎಲ್ಲರ ಮೇಲಿರಲಿ, ರಾಜ್ಯ ಸಮೃದ್ಧಿಯಾಗಲಿ” ಎಂದು ಆಶಯ ವ್ಯಕ್ತಪಡಿಸಿದ್ದಾರೆ..
MUST READ : Tumkur ನಲ್ಲಿ ಅನಧಿಕೃತ ಆಶ್ರಮದ ಮೇಲೆ ದಾಳಿ, 64 ಜನರ ರಕ್ಷಣೆ..!
ಡಿ.ಕೆ. ಶಿವಕುಮಾರ್ ಅವರು ಮೊದಲಿನಿಂದಲೂ ದೇವರ ಮೇಲಿನ ಅಪಾರ ಭಕ್ತಿ ಮತ್ತು ನಂಬಿಕೆಗೆ ಹೆಸರುವಾಸಿಯಾಗಿದ್ದಾರೆ. ರಾಜ್ಯದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದು ಅವರ ಸಂಪ್ರದಾಯವಾಗಿದೆ.
ಅಣ್ಣಮ್ಮ ದೇವಿ ದೇವಸ್ಥಾನದಲ್ಲಿ ಹರಕೆ ತೀರಿಸಿದ್ದ ಡಿಕೆಶಿ
ಇತ್ತೀಚೆಗಷ್ಟೇ ಡಿಕೆ ಶಿವಕುಮಾರ್ ಅವರು ನಗರ ದೇವತೆ ಶ್ರೀ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ತಮ್ಮ ಹರಕೆಯನ್ನು ತೀರಿಸಿದ್ದರು.
ಮುಖ್ಯಮಂತ್ರಿ ಆದರೆ ದೇವಸ್ಥಾನಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸುವುದಾಗಿ ಅವರು ಹರಕೆ ಹೊತ್ತಿದ್ದು, ಅದರಂತೆ ನಡೆದುಕೊಂಡಿದ್ದರು.
ಈ ವೇಳೆ ಉಪ್ಪು ಮತ್ತು ಮೊಸರು ಸಮರ್ಪಿಸಿ ರಾಜ್ಯದಲ್ಲಿ ಸುಖ, ಶಾಂತಿ ಹಾಗೂ ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿದ್ದರು.
ಜೊತೆಗೆ ಬಿಸಿಲು ಮಾರಮ್ಮ ದೇವಿಗೆ ಕೂಡ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದರು.
ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಯಶಸ್ಸಿನ ನಂತರ ಡಿಕೆ ಶಿವಕುಮಾರ್ ಅವರ ತಿರುಪತಿ ಭೇಟಿ ರಾಜಕೀಯ ಹಾಗೂ ಧಾರ್ಮಿಕವಾಗಿ ಗಮನ ಸೆಳೆದಿದೆ. ಕುಟುಂಬದೊಂದಿಗೆ ದೇವರ ದರ್ಶನ ಪಡೆದು ರಾಜ್ಯದ ಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
MUST WATCH : ಸರ್ಕಾರಿ ಶಾಲೆಗೆ DC ದಿಢೀರ್ VISIT -ಮಕ್ಕಳಿಗೆ ಪೌಷ್ಠಿಕ ಆಹಾರ ನೀಡದ್ದಕ್ಕೆ ಗರಂ.! | MADHUGIRI NEWS |




