Beetroot Juice ನ ಆರೋಗ್ಯ ಪ್ರಯೋಜನಗಳು.

ಆರೋಗ್ಯಕರ ಜೀವನಶೈಲಿಯತ್ತ ಜನರ ಒಲವು ಹೆಚ್ಚುತ್ತಿರುವ ಈ ದಿನಗಳಲ್ಲಿ, ನೈಸರ್ಗಿಕ ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಬೀಟ್ರೂಟ್ ಜ್ಯೂಸ್ಗೆ ಬೇಡಿಕೆ ಹೆಚ್ಚುತ್ತಿದೆ. ವಿಟಮಿನ್ಗಳು, ಖನಿಜಾಂಶಗಳು, ಆಂಟಿಆಕ್ಸಿಡೆಂಟ್ಗಳು ಹಾಗೂ ನೈಸರ್ಗಿಕ ನೈಟ್ರೇಟ್ಗಳಿಂದ ಸಮೃದ್ಧವಾಗಿರುವ ಈ ಪಾನೀಯ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ.
ಹೃದಯ ಸಂಬಂಧಿತ ಕಾಯಿಲೆಗಳು ಗುಣ
ಬೀಟ್ರೂಟ್ನಲ್ಲಿರುವ ನೈಸರ್ಗಿಕ ನೈಟ್ರೇಟ್ಗಳು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆಯಾಗಿ ರಕ್ತನಾಳಗಳನ್ನು ವಿಸ್ತರಿಸಲು ಸಹಾಯ ಮಾಡುತ್ತವೆ. ಇದರಿಂದ ರಕ್ತಸಂಚಾರ ಸುಧಾರಿಸಿ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ನೆರವಾಗುತ್ತದೆ. ಜೊತೆಗೆ ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಕಾರಿಯಾಗುತ್ತದೆ.

ಯಕೃತ್ತಿನ ಆರೋಗ್ಯ ಕಾಪಾಡಲು ಸಹಾಯ
ಬೀಟ್ರೂಟ್ನಲ್ಲಿ ಇರುವ ಬಿಟಾಲೈನ್ ಎಂಬ ಶಕ್ತಿಶಾಲಿ ಆಂಟಿಆಕ್ಸಿಡೆಂಟ್ ಚಮಾಡುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಲು ನೆರವಾಗುವುದರ ಜೊತೆಗೆ ಲಿವರ್ನಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯಲು ಸಹಕಾರಿಯಾಗಿದೆ.
ಇದನ್ನು ಓದಿ : ಹಲಸಿನ ಬೀಜಗಳನ್ನು ಸೇವಿಸಿದರೆ ಸಿಗುತ್ತವೆ ಈ ಅದ್ಭುತ ಆರೋಗ್ಯ ಪ್ರಯೋಜನಗಳು..!!

ದಿನವಿಡೀ ಚೈತನ್ಯದಿಂದ ಇರಲು ಸಹಾಯ
ಕ್ರೀಡಾಪಟುಗಳು ಹಾಗೂ ಫಿಟ್ನೆಸ್ ಪ್ರಿಯರಿಗೆ Beetroot Juice ಅತ್ಯುತ್ತಮ ನೈಸರ್ಗಿಕ ಎನರ್ಜಿ ಡ್ರಿಂಕ್ ಆಗಿದೆ. ಇದು ಸ್ನಾಯುಗಳಿಗೆ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಿ ದೈಹಿಕ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸುತ್ತದೆ. ದಣಿವನ್ನು ಕಡಿಮೆ ಮಾಡಿ ದಿನವಿಡೀ ಚೈತನ್ಯದಿಂದ ಇರಲು ಸಹಾಯ ಮಾಡುತ್ತದೆ.
ರಕ್ತಹೀನತೆಯ ಅಪಾಯವನ್ನು ತಡೆಯುತ್ತದೆ
ಬೀಟ್ರೂಟ್ನಲ್ಲಿ ಕಬ್ಬಿಣಾಂಶ, ಫೋಲೇಟ್ ಹಾಗೂ ವಿಟಮಿನ್ ಸಿ ಸಮೃದ್ಧವಾಗಿರುವುದರಿಂದ ಕೆಂಪು ರಕ್ತಕಣಗಳ ಉತ್ಪಾದನೆ ಹೆಚ್ಚುತ್ತದೆ. ಇದರಿಂದ ರಕ್ತಹೀನತೆಯ ಅಪಾಯ ಕಡಿಮೆಯಾಗುತ್ತದೆ. ವಿಶೇಷವಾಗಿ ಯುವತಿಯರಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ.

ಚರ್ಮದ ಆರೋಗ್ಯಕ್ಕೂ ಒಳ್ಳೆಯದು
ಇದರಲ್ಲಿರುವ ಆಂಟಿಆಕ್ಸಿಡೆಂಟ್ಗಳು ರಕ್ತ ಶುದ್ಧೀಕರಣಕ್ಕೂ ನೆರವಾಗಿ, ಮೊಡವೆ ಹಾಗೂ ಚರ್ಮದ ಕಲೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಇದರಿಂದ ಚರ್ಮಕ್ಕೆ ನೈಸರ್ಗಿಕ ಕಾಂತಿ ದೊರೆಯುತ್ತದೆ.
ಇದನ್ನು ನೋಡಿ : ತುಮಕೂರಿನಲ್ಲಿ ಅನಿಷ್ಟ ಪದ್ದತಿ ಜೀವಂತ..!ಕಾರ್ಮಿಕರ ಕೈಯಿಂದ ಮಲ ಹೊರಸಿದ್ರು..!





