ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ Dr Yathindra Siddaramaiah ಸೇರ್ಪಡೆಯಾಗಿದ್ದಾರೆ. ಲೋಕಭವನದ ಗ್ಲಾಸ್ಹೌಸ್ನಲ್ಲಿ ನಡೆದ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ನಿರೀಕ್ಷೆಯಂತೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ Dr Yathindra Siddaramaiah ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನ ಲೋಕಭವನದ ಗ್ಲಾಸ್ಹೌಸ್ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
MUST READ : KPCC ಅಧ್ಯಕ್ಷ ಸ್ಥಾನಕ್ಕೆ BK Hariprasad ಹೆಸರು ಫೈನಲ್…?
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಯತೀಂದ್ರ ಅವರಿಗೆ ಪ್ರಮಾಣ ಬೋಧಿಸಿದರು. ಪ್ರಮಾಣವಚನ ಸ್ವೀಕಾರದ ಬಳಿಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೂಗುಚ್ಛ ನೀಡಿ ನೂತನ ಸಚಿವರನ್ನು ಅಭಿನಂದಿಸಿ ಸ್ವಾಗತಿಸಿದರು. ಡಿಕೆಶಿ ಸಚಿವ ಸಂಪುಟದಲ್ಲಿ ಯತೀಂದ್ರ ಸೇರ್ಪಡೆಯಾಗಿರುವುದು ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬೆಳವಣಿಗೆಯಾಗಿದೆ.
MUST WATCH : ಡಾ.ಜಿ ಪರಮೇಶ್ವರ್ಗೆ ಬಂಪರ್ ಆಫರ್ – ಎರಡನೇ ಬಾರಿ DCM ಆದPARAM | BENGALURU NEWS |




