
BENGALURU : ಎಲೆಕ್ಟ್ರಿಕ್ ಜಂಕ್ಷನ್ ಬಾಕ್ಸ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯ!
ಬೆಂಗಳೂರಿನ ಯಲಹಂಕದಲ್ಲಿ ಎಲೆಕ್ಟ್ರಿಕ್ ಜಂಕ್ಷನ್ ಬಾಕ್ಸ್ ದಿಢೀರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಬಾಗಲೂರು ಕ್ರಾಸ್ ಬಳಿ ಇರುವ ಅಮೆಜಾನ್ ಕಚೇರಿಯ ಗೇಟ್ ನಂಬರ್ 3ರ ಬಳಿ ಘಟನೆ ನಡೆದಿದ್ದು, ಸ್ಫೋಟದ ಭಾರೀ ಶಬ್ದಕ್ಕೆ ಸ್ಥಳದಲ್ಲಿದ್ದ ಸಾರ್ವಜನಿಕರು ಆತಂಕಗೊಂಡಿದ್ದಾರೆ.
ಇಬ್ಬರಿಗೆ ಗಂಭೀರ ಗಾಯ!
ಇನ್ನು ಸ್ಫೋಟದ ವೇಳೆ ಜಂಕ್ಷನ್ ಬಾಕ್ಸ್ ಸಮೀಪದಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಘಟನೆ ನಡೆದ ಕೂಡಲೇ ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
READ THIS : ಬೆಂಗಳೂರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ – ತಾಯಿ, 3 ವರ್ಷದ ಮಗು ಸಾವು!

ತಾಂತ್ರಿಕ ದೋಷದಿಂದ ಸಂಭವಿಸ್ತಾ ಸ್ಪೋಟ?
ಎಲೆಕ್ಟ್ರಿಕ್ ಜಂಕ್ಷನ್ ಬಾಕ್ಸ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಸ್ಫೋಟ ಸಂಭವಿಸಿರಬಹುದು ಎಂಬ ಪ್ರಾಥಮಿಕ ಮಾಹಿತಿ ಇದ್ದು, ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಸ್ಫೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಾ ಅಥವಾ ಬೇರೆ ತಾಂತ್ರಿಕ ಸಮಸ್ಯೆ ಇತ್ತಾ ಅನ್ನೋದು ಪರಿಶೀಲನೆಯ ಬಳಿಕ ಗೊತ್ತಾಗಬೇಕಿದೆ.
BENGALURU – ತನಿಖೆ ಮುಂದುವರಿಕೆ
ಸುದ್ದಿ ತಿಳಿಯುತ್ತಿದ್ದಂತೆ ಯಲಹಂಕ ಉಪನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.

MUST WATCH : ಶಾಲಾ ಬಸ್ ಭೀಕರ ಅಪಘಾ – 15ಕ್ಕೂ ಹೆಚ್ಚು ಮಂದಿಗೆ ಗಾಯ




