Bengaluru Traffic Management ಕುರಿತು ಗೃಹ ಸಚಿವ Priyank Kharge ಮಹತ್ವದ ಸಭೆ ನಡೆಸಿದ್ದು, ಸಂಚಾರ ಸುರಕ್ಷತೆ, ಟ್ರಾಫಿಕ್ ನಿಯಮಗಳ ಕಟ್ಟುನಿಟ್ಟಿನ ಜಾರಿ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಗೆ ಒತ್ತು ನೀಡಲಾಗಿದೆ.

ರಾಜ್ಯದಲ್ಲಿ ಸಂಚಾರ ಸುರಕ್ಷತೆ ಮತ್ತು ಟ್ರಾಫಿಕ್ ನಿಯಮಗಳ ಕಟ್ಟುನಿಟ್ಟಿನ ಜಾರಿಗೆ ಆದ್ಯತೆ ನೀಡಲಾಗುವುದು ಎಂದು ಗೃಹ, ಮಾಹಿತಿ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ Priyank Kharge ತಿಳಿಸಿದ್ದಾರೆ. ಬೆಂಗಳೂರು ಸಂಚಾರ ಪೊಲೀಸ್ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಹಿರಿಯ ಅಧಿಕಾರಿಗಳೊಂದಿಗೆ ನಗರದ ಟ್ರಾಫಿಕ್ ವ್ಯವಸ್ಥೆ ಕುರಿತು ಸಮಗ್ರ ಚರ್ಚೆ ನಡೆಸಿ ಮಾಹಿತಿ ಪಡೆದರು.
MUST READ : Vachanananda Swamiji ವಿರುದ್ಧ 410 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ..!!

ಈ ವೇಳೆ ಮಾತನಾಡಿದ ಸಚಿವರು, ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಬೆಂಗಳೂರಿನಲ್ಲಿ ಪರಿಣಾಮಕಾರಿ ಟ್ರಾಫಿಕ್ ನಿರ್ವಹಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆಯನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.
ಹಿರಿಯ ಪೊಲೀಸ್ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ ಜನಸಂಖ್ಯೆ ವಾರ್ಷಿಕ ಶೇ.3.7ರಷ್ಟು ಹೆಚ್ಚಾಗುತ್ತಿದ್ದರೆ, ವಾಹನಗಳ ಸಂಖ್ಯೆ ಶೇ.10ರಷ್ಟು ಏರಿಕೆಯಾಗುತ್ತಿದೆ. ಸುಮಾರು 1.25 ಕೋಟಿ ನೋಂದಾಯಿತ ವಾಹನಗಳು ಮತ್ತು 14 ಸಾವಿರ ಕಿಲೋಮೀಟರ್ ರಸ್ತೆ ಜಾಲ ಹೊಂದಿರುವ ನಗರದಲ್ಲಿ 53 ಸಂಚಾರ ಪೊಲೀಸ್ ಠಾಣೆಗಳ ಮೂಲಕ ಟ್ರಾಫಿಕ್ ನಿರ್ವಹಣೆ ಮಾಡಲಾಗುತ್ತಿದೆ.

ಪ್ರಿಯಾಂಕ್ ಖರ್ಗೆ ಅವರು ಸಂಚಾರ ಪೊಲೀಸ್ ವಸ್ತುಸಂಗ್ರಹಾಲಯ ಹಾಗೂ ಕ್ಯಾಮೆರಾ ಟ್ರ್ಯಾಕಿಂಗ್ ವಿಭಾಗಕ್ಕೂ ಭೇಟಿ ನೀಡಿ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಸಭೆಯಲ್ಲಿ ಡಿಜಿ ಮತ್ತು ಐಜಿಪಿ ಡಾ. ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
MUST WATCH : ಶಾಸಕ ಷಡಕ್ಷರಿ ಆರೋಗ್ಯದಲ್ಲಿ ಚೇತರಿಕೆ ಇಂದು ಅಥವಾ ನಾಳೆ ಡಿಸ್ಚಾರ್ಜ್ ಸಾಧ್ಯತೆ




