ಬೈಕಿಗೆ KSRTC ಬಸ್ ಡಿಕ್ಕಿ ಯುವಕ ಸ್ಥಳದಲ್ಲೇ ಸಾ*

ಶಿರಾ ತಾಲೂಕಿನ ಮೇಲ್ಕುಂಟೆ ಗೇಟ್ ಸಮೀಪ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
KSRTC ಬಸ್-ಬೈಕ್ ನಡುವೆ ಭೀಕರ ಅಪಘಾತ..!
ಶಿರಾದ ಮೇಲ್ಕುಂಟೆ ಗೇಟ್ ಬಳಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : ವಿದ್ಯುತ್ ತಂತಿ ಸ್ಪರ್ಶಿಸಿ ತೋಟದಲ್ಲಿ ಕಾಡಾನೆ ಸಾವು..!

ಮೃತ ಯುವಕನನ್ನು ಶಿರಾ ನಗರದ ಕೋಟೆ ನಿವಾಸಿ ಇಮ್ರಾನ್ ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪಟ್ಟನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
MUST WATCH : ಮಳೆಗಾಗಿ ಕತ್ತೆಗಳ ಅದ್ಧೂರಿ ಮದುವೆ – ಶಾಸ್ತ್ರೋಕ್ತ ಮದುವೆ ಬಳಿಕ ಮೆರವಣಿಗೆ




