Koppal ಜಿಲ್ಲೆಯ ಮುನಿರಾಬಾದ್ ಬಳಿ ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ.

Koppal : ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಏಳು ಮಂದಿ ಮೃತಪಟ್ಟ ದುರ್ಘಟನೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಕೆಂಚಪ್ಪ (35), ಮಹಾಂತೇಶ್ (18), ಭರತ್ (1), ಸವಿತಾ (12), ಮಾರೇಶ್, ಗೌರಮ್ಮ ಹಾಗೂ ಮಂಜಮ್ಮ ಎಂದು ಗುರುತಿಸಲಾಗಿದೆ.
ಮೃತರು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ.
MUST READ : Sirsi : ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿ ಟ್ರ್ಯಾಕ್ಟರ್ ಡಿಕ್ಕಿಗೆ ಬಲಿ..!!

ಅಪಘಾತ ಹೇಗೆ ಸಂಭವಿಸಿತು?
50ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಹಿಂದಿನಿಂದ ವೇಗವಾಗಿ ಬಂದ ಟ್ಯಾಂಕರ್ ಲಾರಿ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ, ಟ್ರ್ಯಾಕ್ಟರ್ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ.
ಡಿಕ್ಕಿಯ ತೀವ್ರತೆಗೆ ಮಗು ಸೇರಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದಲ್ಲದೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳ ಸ್ಥಿತಿ ಗಂಭೀರ
ಗಾಯಾಳುಗಳನ್ನು ತಕ್ಷಣ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.
ಹೆಚ್ಚಿನ ಚಿಕಿತ್ಸೆಗೆ ಕೆಲವರನ್ನು ಬಳ್ಳಾರಿ ಅಥವಾ ಬೆಂಗಳೂರಿನ ಆಸ್ಪತ್ರೆಗೆ ರವಾನಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಜಯನಗರ ಎಸ್ಪಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್ಪಿ ಕೆಪಿ ಮುರಳೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನೊಂದೆಡೆ, ಕೊಪ್ಪಳ ಎಸ್ಪಿ ಎಲ್ ಅರಸಿದ್ದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
MUST WATCH : ಡಿಕೆಶಿಗೆ ಇಂದು ಹುಟ್ಟುಹಬ್ಬದ ಸಂಭ್ರಮ ವಿಶೇಷವಾಗಿ ಆಶೀರ್ವಾದಿಸಿದ ಪುರೋಹಿತರು | DKS BIRTHDAY SPECIAL |




