ಗ್ರಾ,ಪಂ. ಮುಂದೆಯೇ ಭೀಕರ Murder – ತಂದೆ – ಮಗಳು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಚನ್ನಮ್ಮ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ರಕ್ತಪಾತವೇ ನಡೆದು ಹೋಗಿದೆ. ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲೇ ತಂದೆ-ಮಗಳನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರೋ ಭೀಕರ ಘಟನೆ ನಡೆದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಇನ್ನು ಮೃತರನ್ನ ಮಾಜಿ ಸೈನಿಕ ರುದ್ರಪ್ಪ ಕುಂದರಗಿ ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ ಎಂದು ಗುರುತಿಸಲಾಗಿದ್ದು, ದಾಳಿಯಲ್ಲಿ ಮತ್ತೋರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
READ THIS : ದೃಶ್ಯಂ ಸ್ಟೈಲ್ ಮರ್ಡರ್- ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದಾಳು ಕಥೆ ಮುಗಿಸಿದ ಮಗ..!!

ಮಾರಕಾಸ್ತ್ರಗಳಿಂದ ದಾಳಿ
ಇನ್ನು ರುದ್ರಪ್ಪ ಕುಂದರಗಿ ಕುಟುಂಬದಲ್ಲಿ ಹಲವು ದಿನಗಳಿಂದ, ಆಸ್ತಿ ಹಂಚಿಕೆ ವಿಚಾರವಾಗಿ ವಿವಾದ ನಡೆಯುತ್ತಿತ್ತಂತೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ಹಾಗೂ ದಾಖಲೆ ಪರಿಶೀಲನೆಗಾಗಿ ತಂದೆ-ಮಗಳು ಗ್ರಾಮ ಪಂಚಾಯಿತಿ ಕಚೇರಿಗೆ ಬಂದಿದ್ದರು. ಈ ವೇಳೆ ಜಗಳ ವಿಕೋಪಕ್ಕೆ ಹೋಗಿದ್ದು, ರುದ್ರಪ್ಪ ಅವರ ಇಬ್ಬರು ಸಹೋದರರು ಹಾಗೂ ಸಹೋದರನ ಪುತ್ರ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಸಿಬ್ಬಂದಿ ಹಾಗೂ ಸಾರ್ವಜನಿಕರು ನೋಡ ನೋಡ್ತಿದ್ದಂತೆಯೇ ಈ ಭೀಕರ ದಾಳಿ ನಡೆದಿದ್ದು, ರಕ್ತದ ಮಡುವಿನಲ್ಲಿ ಬಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಸ್ತಿ ವಿಚಾರಕ್ಕೆ ಶುರುವಾದ ಜಗಳ Murder ನಲ್ಲಿ ಅಂತ್ಯ!
ಇನ್ನು ವಿಷಯ ತಿಳಿಯುತ್ತಿದ್ದಂತೆ ಎಸ್ಪಿ ರಾಮರಾಜನ್ ಸೇರಿದಂತೆ ಕಿತ್ತೂರು ಠಾಣೆಯ ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್ಐ ಭರತ್ ಎಸ್. ಹಾಗೂ ಗಂಗಾಧರ ಹಂಪಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ತನಿಖೆ ಚುರುಕುಗೊಳಿಸಿದ್ದಾರೆ. ಆದ್ರೆ ಅದೇನೆ ಆಗಲಿ, ಆಸ್ತಿ ವಿಚಾರಕ್ಕೆ ಶುರುವಾದ ಜಗಳ ಕೊನೆಗೆ ಎರಡು ಜೀವಗಳನ್ನೇ ಬಲಿ ಪಡೆದಿರೋದು ದುರಂತವೇ ಸರಿ.

MUST WATCH : ಕೆರೆಯಲ್ಲಿ ಇಬ್ಬರು ಯುವಕರು ನೀರುಪಾಲು – ನಾಲ್ಕು ಗಂಟೆಗಳ ಬಳಿಕ ಮೃತದೇ* ಪತ್ತೆ




