ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ ಆರೋಪ – ಇನ್ಫ್ಲೂಯೆನ್ಸರ್ ಅಮುಕು ಡುಮುಕು ವಿರುದ್ಧ FIR

ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಹಾಗೂ ಬಿಲ್ ಕೇಳಿದಾಗ ಗಲಾಟೆ ನಡೆಸಿ ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾ ಇನ್ಫ್ಲೂಯೆನ್ಸರ್ ಮಂಜು ಅಲಿಯಾಸ್ ‘ಅಮುಕು ಡುಮುಕು’ ವಿರುದ್ಧ FIR ದಾಖಲಾಗಿದೆ.
ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ!
ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪದ ಪ್ರಕಾರ ಜುಲೈ 9ರ ರಾತ್ರಿ ಮಂಜು ತನ್ನ ಸ್ನೇಹಿತರೊಂದಿಗೆ ನಗರದ ರೆಸ್ಟೋ ಬಾರ್ಗೆ ತೆರಳಿ ಊಟ ಮತ್ತು ಮದ್ಯ ಸೇವಿಸಿದ್ದರು. ಬಳಿಕ ಬಿಲ್ ನೀಡುವಂತೆ ಕೇಳಿದ ಮಹಿಳಾ ಸಿಬ್ಬಂದಿಯೊಂದಿಗೆ ಅವರು ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : ಅಮುಕು ಡುಮುಕು ನಿಜಕ್ಕೂ ಪೆಟ್ರೋಲ್ ಕುಡಿದರಾ? ಸಿನಿಮಾ ಪ್ರಚಾರಕ್ಕೆ ಚೀಪ್ ಗಿಮಿಕ್

ಕೊಲೆ ಬೆದರಿಕೆ ಆರೋಪ
ಬಾರ್ನಿಂದ ಹೊರಡುವ ವೇಳೆ ಮಹಿಳಾ ಸಿಬ್ಬಂದಿ ಪ್ರಶ್ನಿಸಿದಾಗ, ಆಕೆಗೆ ಸೆಲ್ಫಿ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದು, ಇದೇ ವೇಳೆ ಮಧ್ಯಪ್ರವೇಶಿಸಿದ ಪಬ್ ಮ್ಯಾನೇಜರ್ ಮೇಲೂ ಹಲ್ಲೆಗೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಅಮುಕು ಡುಮುಕು ವಿರುದ್ಧ FIR
ಈ ಸಂಬಂಧ ಮಂಜು ಅಲಿಯಾಸ್ ಅಮುಕು ಡುಮುಕು ಹಾಗೂ ಅವರ ಸ್ನೇಹಿತರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಇನ್ನು ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದು, ವಿಚಾರಣೆ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಇದನ್ನು ನೋಡಿ : ಕೆಟ್ಟು ನಿಲ್ತಿವೆ EV CHARGING POINTಗಳು – ಪರಿಸರ ಸ್ನೇಹಿ ವಾಹನ ಖರೀದಿಸುವವರಿಗೆ ಸಂಕಷ್ಟ




