Kolar ಜಿಲ್ಲೆಯ ಬಂಗಾರಪೇಟೆ ಸಮೀಪದ ಕಾರು ಸರ್ವಿಸ್ ಸೆಂಟರ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು 3 ಕಾರುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.

Kolar ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಸ್.ಜಿ. ಕೋಟೆ ಸಮೀಪ ಇರುವ ಚೌಡೇಶ್ವರಿ ಕಾರ್ ಸರ್ವಿಸ್ ಸೆಂಟರ್ನಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಈರಣ್ಣ ಅವರಿಗೆ ಸೇರಿದ ಗ್ಯಾರೇಜ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅನಾಹುತ ಸಂಭವಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದ್ದು, ಗ್ಯಾರೇಜ್ನೊಳಗಿದ್ದ ಮೂರು ಕಾರುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಹೊರಗೆ ನಿಲ್ಲಿಸಿದ್ದ ಇನ್ನೆರಡು ಕಾರುಗಳಿಗೆ ಭಾಗಶಃ ಹಾನಿಯಾಗಿದೆ.
MUST READ : Parameshwar , KN Rajanna ಗೆ ಗೌರವ ಡಾಕ್ಟರೇಟ್ ನೀಡದಿರಲು ತುಮಕೂರು ವಿವಿ ನಿರ್ಧಾರ..!!
ಅಗ್ನಿ ಅವಘಡದ ವೇಳೆ ಸರ್ವಿಸ್ ಸೆಂಟರ್ನಲ್ಲಿ ಯಾವುದೇ ಕೆಲಸಗಾರರು ಇರಲಿಲ್ಲ. ಹೀಗಾಗಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ಕಟ್ಟಡ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿಗೆ ಹಾನಿಯಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಗಾರಪೇಟೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇದರಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲು ಸಾಧ್ಯವಾಯಿತು.
ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡದ ಕುರಿತು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
MUST WATCH : DKS ಪಟ್ಟಾಭಿಷೇಕಕ್ಕೆ ಭರ್ಜರಿ ತಯಾರಿ – ಫ್ಲೆಕ್ಸ್, ಬ್ಯಾನರ್ ಕಟ್ಟುವವರಿಗೆ ಹೈಕೋರ್ಟ್ ಶಾಕ್ | BENGALURU NEWS |




