Delhi ಯಲ್ಲಿ ಭೀಕರ ಅಗ್ನಿ ದುರಂತ – 10 ಮಂದಿ ಸಜೀವ ದಹನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ರೆಸ್ಟೋರೆಂಟ್ನಲ್ಲಿ ಅಗ್ನಿ ದುರಂತ
ದಕ್ಷಿಣ Delhi ಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿಯ ಲೆಮನ್ ಗ್ರೀನ್ ರೆಸ್ಟೋರೆಂಟ್ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಇಂದು ಬೆಳಿಗ್ಗೆ ಉಪಾಹಾರದ ಸಮಯದಲ್ಲಿ ರೆಸ್ಟೋರೆಂಟ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಕಟ್ಟಡದ ಹಲವು ಭಾಗಗಳಿಗೆ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ : ಯಾದಗಿರಿಯಲ್ಲಿ ಶಾರ್ಟ್ ಸರ್ಕ್ಯೂಟ್ ದುರಂತ- 1 ಕೋಟಿ ಮೌಲ್ಯದ 60 ಟನ್ ಹತ್ತಿ ಭಸ್ಮ

ಬೇಸ್ಮೆಂಟ್ನಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣೆ
ಮಾಹಿತಿ ತಿಳಿದ ತಕ್ಷಣ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ನೆಹರೂ ಪ್ಲೇಸ್ ಅಗ್ನಿಶಾಮಕ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಈ ಕಾರ್ಯಾಚರಣೆಗೆ ವಿಭಾಗೀಯ ಅಧಿಕಾರಿ ರವೀಂದರ್ ನೇತೃತ್ವ ವಹಿಸಿದ್ದರು. ರಕ್ಷಣಾ ಕಾರ್ಯಾಚರಣೆ ವೇಳೆ ರೆಸ್ಟೋರೆಂಟ್ನ ನೆಲಮನೆ (ಬೇಸ್ಮೆಂಟ್)ಯಲ್ಲಿ ಸಿಲುಕಿದ್ದ ಮೂವರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಹೊರತೆಗೆದು ಕ್ಯಾಟ್ಸ್ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ದೆಹಲಿ ಪೊಲೀಸರ ಮಾಹಿತಿ ಪ್ರಕಾರ, ಘಟನೆಯಲ್ಲಿ ಒಟ್ಟು 11 ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ
ಅಗ್ನಿ ಅವಘಡದ ತೀವ್ರತೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಯನ್ನು ಅಧಿಕಾರಿಗಳು ತಳ್ಳಿಹಾಕಿಲ್ಲ. ಸದ್ಯ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದ್ದು, ಶಾರ್ಟ್ ಸರ್ಕ್ಯೂಟ್ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಯುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ದೆಹಲಿ ಆಡಳಿತ ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನು ನೋಡಿ : SIDDU ನಿವಾಸದಲ್ಲಿ DK..! – DKSಶಿನ ನೋಡ್ತಿದ್ದಂತೆ ನಗುತ್ತಲೇ ಅಪ್ಪಿಕೊಂಡ SIDDARAMAIAH




