Tumakuru ಡಿಸಿ ನಿವಾಸದಲ್ಲಿ ಬೆಂಕಿ – ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ

ತುಮಕೂರು ಜಿಲ್ಲಾಧಿಕಾರಿ ಸರ್ಕಾರಿ ವಸತಿ ಗೃಹದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದೆ. ಶಿರಾ ಗೆಟ್ ಬಳಿಯಿರುವ ಜಿಲ್ಲಾಧಿಕಾರಿ ನಿವಾಸದಲ್ಲಿ ನಿನ್ನೆ ತಡರಾತ್ರಿ ಸುಮಾರು 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್ನಿಂದ ಎಸಿ ಯೂನಿಟ್ಗೆ ಬೆಂಕಿ
ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಸರ್ಕಾರಿ ನಿವಾಸದಲ್ಲಿದ್ದ ಎಸಿ ಯೂನಿಟ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
READ THIS : ಕರೆಂಟ್ ಕಟ್ ಮಾಡಿದಕ್ಕೆ ಜೆಸ್ಕಾಂ ಕಚೇರಿಗೆ ಬೆಂಕಿ..!!

Tumakuru – ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ
ಇನ್ನು ಬೆಂಕಿಯಿಂದಾಗಿ ಮನೆ ತುಂಬಾ ದಟ್ಟ ಹೊಗೆ ಆವರಿಸಿಕೊಂಡ ಹಿನ್ನೆಲೆ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

MUST WATCH : ಡಿಸಿ ಕಚೇರಿಗೆ ಬಾಂಬ್ ಈ ಮೇಲ್ – ಕಚೇರಿಯ ಸುತ್ತ ಸರ್ಪಗಾವಲು




