Metro ಪ್ರಯಾಣಿಕರಿಗೆ ಗುಡ್ ನ್ಯೂಸ್, ಡಬಲ್ ಡೆಕ್ಕರ್ ಫ್ಲೈ ಓವರ್ ಕಾಮಗಾರಿ ಆರಂಭಕ್ಕೆ ಮುನ್ಸೂಚನೆ.

ಕೇಂದ್ರವು ಡಬಲ್ ಡೆಕ್ಕರ್ ಹೊಂದಿರುವ ನಮ್ಮ ಮೆಟ್ರೋ (Namma Metro) ಹಂತ 3 ಅನ್ನು ಅನುಮೋದಿಸಲು ಸಿದ್ಧವಾಗಿದೆ. ಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಯ ಮೊದಲ ಫಲ ದೊರಕಿದ್ದು, ಆರೆಂಜ್ ಲೈನ್ ಮೆಟ್ರೋ ಮಾರ್ಗದಲ್ಲೂ ಡಬಲ್ ಡೆಕ್ಕರ್ ಫ್ಲೈ ಓವರ್ ಬರಲಿದೆ.
Metro ಪ್ರಯಾಣಿಕರಿಗೆ ಸದ್ಯದಲ್ಲೇ ಮತ್ತೊಂದು ಗುಡ್ ನ್ಯೂಸ್
ರಾಜಧಾನಿ ಬೆಂಗಳೂರಿನ ಮಹತ್ವಾಕಾಂಕ್ಷಿ ಆರೆಂಜ್ ಲೈನ್ ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಅನುಮೋದನೆ ನೀಡುವ ಸಾಧ್ಯತೆಗಳು ಕಾಣಿಸಿಕೊಂಡಿವೆ. ಈ ಬೆಳವಣಿಗೆ ಮೆಟ್ರೋ ಕಾಮಗಾರಿಗೆ ವೇಗ ಸಿಗುವ ನಿರೀಕ್ಷೆ ಮೂಡಿಸಿದೆ.
ಕಳೆದ ವರ್ಷ ಪ್ರಧಾನಿ Narendra Modi ಅವರು ಯೆಲ್ಲೋ ಲೈನ್ ಮೆಟ್ರೋ ಉದ್ಘಾಟನೆ ನೆರವೇರಿಸಿ, ಇದೇ ವೇಳೆ ಆರೆಂಜ್ ಲೈನ್ ಮೆಟ್ರೋ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಆದರೆ ತಾಂತ್ರಿಕ ಹಾಗೂ ಆಡಳಿತಾತ್ಮಕ ಅಡಚಣೆಗಳಿಂದ ಕಾಮಗಾರಿ ಇನ್ನೂ ಆರಂಭವಾಗಿಲ್ಲ.

ಏಕೆ ತಡವಾಯ್ತು..?
- ಡಬಲ್ ಡೆಕ್ಕರ್ ಫ್ಲೈಓವರ್ ಪ್ರಸ್ತಾವನೆ
- ಕೇಂದ್ರ ನಗರಾಭಿವೃದ್ಧಿ ಇಲಾಖೆಯ ಆಕ್ಷೇಪ
- ಅಂತಿಮ ಅನುಮೋದನೆ ಬಾಕಿ
ಆರೆಂಜ್ ಲೈನ್ ಮಾರ್ಗದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮೆಟ್ರೋ ಮಾರ್ಗದ ಜೊತೆಗೆ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಖಾಸಗಿ ವಾಹನಗಳ ಬಳಕೆ ಹೆಚ್ಚಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ ಎಂಬ ಕಾರಣ ನೀಡಿ ಕೇಂದ್ರ ನಗರಾಭಿವೃದ್ಧಿ ಇಲಾಖೆ ಆರಂಭದಲ್ಲಿ ಆಕ್ಷೇಪ ವ್ಯಕ್ತಪಡಿಸಿತ್ತು.
ಸಿಎಂ ದೆಹಲಿ ಭೇಟಿಯ ಮೊದಲ ಫಲ
ಇತ್ತೀಚೆಗೆ ಮುಖ್ಯಮಂತ್ರಿ D. K. Shivakumar ಅವರು ನವದೆಹಲಿಯಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಯೋಜನೆಯ ಅಗತ್ಯತೆ ವಿವರಿಸಿದ್ದಾರೆ. ಡಬಲ್ ಡೆಕ್ಕರ್ ಫ್ಲೈಓವರ್ ಹಾಗೂ ಮೆಟ್ರೋ ಕಾಮಗಾರಿಗೆ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಇದನ್ನು ಓದಿ : Metro ಪ್ರಯಾಣಿಕರಿಗೆ ಗುಡ್ನ್ಯೂಸ್ – ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ..!!
ಮೆಟ್ರೋ ಮೂರನೇ ಹಂತದ ಮಾರ್ಗಗಳು
- ಜೆಪಿ ನಗರ 4ನೇ ಹಂತದಿಂದ ಕೆಂಪಾಪುರ
- ಉದ್ದ: 32.5 ಕಿ.ಮೀ.
- ಹೊಸಹಳ್ಳಿ–ಮಾಗಡಿ ರಸ್ತೆ–ಕಡಬಗೆರೆ
- ಉದ್ದ: 12.15 ಕಿ.ಮೀ.
ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಎರಡು ಪ್ರಮುಖ ಮಾರ್ಗಗಳಿದ್ದು, ಜೆಪಿ ನಗರ 4ನೇ ಹಂತದಿಂದ ಕೆಂಪಾಪುರದವರೆಗೆ 32.5 ಕಿಲೋಮೀಟರ್ ಉದ್ದದ ಮಾರ್ಗ ಹಾಗೂ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮೂಲಕ ಕಡಬಗೆರೆಯವರೆಗೆ 12.15 ಕಿಲೋಮೀಟರ್ ಉದ್ದದ ಮತ್ತೊಂದು ಮಾರ್ಗ ನಿರ್ಮಾಣಗೊಳ್ಳಲಿದೆ.

ಸಾವಿರಾರು ಉದ್ಯೋಗಿಗಳಿಗೆ ಹೆಚ್ಚಿನ ಅನುಕೂಲ
ಯೋಜನೆ ಜಾರಿಯಾದರೆ ಔಟರ್ ರಿಂಗ್ ರೋಡ್ ಪ್ರದೇಶದ ಸಂಚಾರ ದಟ್ಟಣೆ ಕಡಿಮೆಯಾಗುವುದರ ಜೊತೆಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ಉತ್ತೇಜನ ಸಿಗಲಿದೆ. ವಿಶೇಷವಾಗಿ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಸಂಚರಿಸುವ ಸಾವಿರಾರು ಉದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎನ್ನಲಾಗಿದೆ.
ಆರೆಂಜ್ ಲೈನ್ ಮೆಟ್ರೋ ಹಾಗೂ ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಗೆ ಅಂತಿಮ ಅನುಮೋದನೆ ದೊರೆತರೆ, ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲಿರುವ ಮತ್ತೊಂದು ದೊಡ್ಡ ಮೂಲಸೌಕರ್ಯ ಯೋಜನೆಯಾಗಿ ಇದು ರೂಪುಗೊಳ್ಳಲಿದೆ.
ಇದನ್ನು ನೋಡಿ : ಕಾಳಸಂತೆಯಲ್ಲಿ ಗೊಬ್ಬರ ಮಾರಿದ್ರೆ ಹುಷಾರ್ ಸಚಿವ ಈಶ್ವರ ಖಂಡ್ರೆ ಖಡಕ್ ವಾರ್ನಿಂಗ್




