ಚಿಕ್ಕಬಳ್ಳಾಪುರ ಜಿಲ್ಲೆಯ Bagepalli ತಾಲೂಕಿನ ಸುಂಕಲಮ್ಮ ದೇವಾಲಯದ ಬಳಿ ಕಾರು ಡಿಕ್ಕಿಯಾದ ಪರಿಣಾಮ ಆಟೋ ಲಾರಿಗೆ ಢಿಕ್ಕಿಯಾಗಿ ಐವರು ಮೃತಪಟ್ಟಿದ್ದಾರೆ.

Bagepalli : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಕಾರು ಮತ್ತು ಆಟೋ ನಡುವೆ ಸಂಭವಿಸಿದ ಡಿಕ್ಕಿಯಿಂದ ಈ ದುರಂತ ಸಂಭವಿಸಿದೆ.
ಹಿಂಬದಿಯಿಂದ ಡಿಕ್ಕಿ ಹೊಡೆದ ಥಾರ್ ಕಾರು
ಪ್ರಾಥಮಿಕ ಮಾಹಿತಿಯ ಪ್ರಕಾರ, ರಸ್ತೆ ಮೇಲೆ ಸಾಗುತ್ತಿದ್ದ ಪ್ಯಾಸೆಂಜರ್ ಆಟೋಗೆ ಹಿಂಬದಿಯಿಂದ ಥಾರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಆಟೋ ಮುಂದೆ ನಿಂತಿದ್ದ ಲಾರಿಗೆ ಢಿಕ್ಕಿಯಾಗಿದೆ.
ಈ ಪರಿಣಾಮ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
MUST READ : ಮುಂದಿನ 2 ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಭಾರೀ ಮಳೆ

ಹಲವರಿಗೆ ಗಾಯ
ಅಪಘಾತದಲ್ಲಿ 3 ರಿಂದ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವೈದ್ಯರು ಗಾಯಾಳುಗಳ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸಂಚಾರ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ಕ್ರಮ ಕೈಗೊಳ್ಳಲಾಗಿದೆ.
ಪ್ರಕರಣ ದಾಖಲು
ಈ ಘಟನೆ ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.
MUST WATCH : ಗೋ ಹತ್ಯೆ ಆರೋಪ ಪ್ರಕರಣಕ್ಕೆ ಆಕ್ರೋಶ ಮಧ್ಯರಾತ್ರಿವರೆಗೂ ಸಂಘಟನೆಗಳ ಪ್ರತಿಭಟನೆ

