
ನೇಪಾಳ ಜಲಪ್ರಳಯಕ್ಕೆ ನಗರಗಳೇ ಸರ್ವನಾಶ: 300 ಭಾರತೀಯರು ಸೇರಿ ನೂರಾರು ಜನ ನಾಪತ್ತೆ!
ನೇಪಾಳದ ರಸುವಾ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಸಾವಿನ ಸಂಖ್ಯೆ 160ಕ್ಕೆ ಏರಿಕೆಯಾಗಿದೆ. ದುರಂತದ ಬಳಿಕ ಕೈಲಾಸ ಮಾನಸ ಸರೋವರ ಯಾತ್ರೆಯಲ್ಲಿದ್ದ ಸುಮಾರು 300 ಭಾರತೀಯರು ಸೇರಿದಂತೆ 500ಕ್ಕೂ ಹೆಚ್ಚು ವಿದೇಶಿ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ತಿಳಿಸಿದ್ದಾರೆ.
ನೇಪಾಳದಲ್ಲಿ ಜಲಪ್ರಳಲ
ಕಠ್ಮಂಡುವಿನಲ್ಲಿ ನಡೆದ ‘ಎನ್ಡಿಟಿವಿ ವಿಶ್ವ ಅನ್ವಿಕ್ಷಾ ಶೃಂಗಸಭೆ’ಯಲ್ಲಿ ಮಾತನಾಡಿದ ಸಚಿವರು, ಕೆಲವೇ ಗಂಟೆಗಳ ಅವಧಿಯಲ್ಲಿ ಭಾರೀ ಪ್ರಮಾಣದ ನೀರು ಹರಿದು ಬಂದು ಹಲವು ಪಟ್ಟಣಗಳು ಮತ್ತು ಗ್ರಾಮಗಳನ್ನು ಆಪೋಶನ ತೆಗೆದುಕೊಂಡಿವೆ ಎಂದು ಆತಂಕ ವ್ಯಕ್ತಪಡಿಸಿದರು.
READ THIS : ಕೇರಳದಲ್ಲಿ ಭಾರಿ ಮಳೆಯಿಂದ ಭೂಕುಸಿತ – ಮೂವರು ಸಾವು!

ಸಾವಿರಾರು ಕುಟುಂಬಗಳು ನಿರಾಶ್ರಿತ
ಹಠಾತ್ ಪ್ರವಾಹದಿಂದ ಸಾವಿರಾರು ಕುಟುಂಬಗಳು ಮನೆ-ಮಠ ಕಳೆದುಕೊಂಡಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಪ್ರವಾಹದಿಂದ ಉಂಟಾಗಿರುವ ಒಟ್ಟು ಹಾನಿಯ ಪ್ರಮಾಣವನ್ನು ಅಂದಾಜಿಸಲು ನೇಪಾಳದ ಆಡಳಿತ ಹಾಗೂ ರಕ್ಷಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ.
300 ಭಾರತೀಯರು ನಾಪತ್ತೆ!
ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಸುಮಾರು 300 ಭಾರತೀಯ ಯಾತ್ರಿಕರು ಟಿಬೆಟ್ ಗಡಿ ಭಾಗದಲ್ಲಿರುವ ಮಾರ್ಗದಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಅವರ ಮೊಬೈಲ್ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಸ್ಥಳ ಪತ್ತೆಹಚ್ಚಲು ನೇಪಾಳ ಸರ್ಕಾರವು ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಸ್ವದೇಶಿ ನಾಗರಿಕರಷ್ಟೇ ವಿದೇಶಿ ಪ್ರಜೆಗಳ ರಕ್ಷಣೆಗೂ ನೇಪಾಳ ಬದ್ಧವಾಗಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

MUST WATCH : RADHANAGARI DAM ಸಂಪೂರ್ಣ ಭರ್ತಿ – KARNATAKAದತ್ತ ಹೆಚ್ಚಿದ ನೀರಿನ ಹರಿವು..!




