ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಾಜಿ CM ಸಿದ್ದರಾಮಯ್ಯ ಅವರು ಗೈರುಹಾಜರಾಗುವ ಮೂಲಕ ತಮ್ಮ ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಆಂತರಿಕ ಅಸಮಾಧಾನ ಬಹಿರಂಗಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರುಹಾಜರಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸ್ ನಾಯಕರ ನಡುವೆ ಭಿನ್ನಾಭಿಪ್ರಾಯ
ಸಚಿವರ ಅಂತಿಮ ಪಟ್ಟಿಯನ್ನು ರೂಪಿಸುವ ವೇಳೆ ಕಾಂಗ್ರೆಸ್ ನಾಯಕರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು ಎನ್ನಲಾಗುತ್ತಿದ್ದು, ಇದೇ ಹಿನ್ನೆಲೆಯಲ್ಲಿ ಮಾಜಿ CM ಸಿದ್ದರಾಮಯ್ಯ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ನೂತನ ಸಚಿವರು ಈ ವೇಳೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನು ಓದಿ : ಸಂಪುಟ ವಿಸ್ತರಣೆ – ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು
ಮಾಜಿ CM ಗೈರಿಗೆ ಕಾರಣವೇನು?
ಕಾಂಗ್ರೆಸ್ ಮೂಲಗಳ ಪ್ರಕಾರ, ಕುರುಬ ಸಮುದಾಯದ ನಾಯಕಿ ಹಾಗೂ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಕೊನೆಯ ಕ್ಷಣದಲ್ಲಿ ಸಚಿವರ ಪಟ್ಟಿಯಿಂದ ಕೈಬಿಟ್ಟಿರುವುದು ಸಿದ್ದರಾಮಯ್ಯ ಅವರ ಅಸಮಾಧಾನಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ನೀಡುವಂತೆ ಸಿದ್ದರಾಮಯ್ಯ ಒಲವು ತೋರಿದ್ದರು ಎಂದು ಹೇಳಲಾಗುತ್ತಿದ್ದು, ಅಂತಿಮ ಪಟ್ಟಿಯಲ್ಲಿ ಅವರ ಹೆಸರು ಕೈಬಿಡಲಾಗಿದೆ ಎಂಬ ಬೆಳವಣಿಗೆ ಮಾಜಿ ಮುಖ್ಯಮಂತ್ರಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದನ್ನು ನೋಡಿ : GUBBI ಕೆರೆಗಳಿಗೆ HEMAVATHI ನೀರು ಹರಿಸಿ – ಇಲ್ಲವಾದ್ರೆ ಉಗ್ರ ಹೋರಾಟದ ಎಚ್ಚರಿಕೆ




