
ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರು- ಬಸ್ ನಡುವೆ ಭೀಕರ Accident, ಇಬ್ಬರಿಗೆ ಗಾಯ
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ರಮಾನಾಥ ರೈ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಕಳದ ಸಾಣೂರು ರಾಮಮಂದಿರ ಡಿವೈಡರ್ ಕ್ರಾಸ್ ಬಳಿ ಇಂದು ಘಟನೆ ನಡೆದಿದ್ದು, Accident ನಲ್ಲಿ ಕಾರು ಚಾಲಕ ಹಾಗೂ ರಮಾನಾಥ ರೈ ಅವರ ಆಪ್ತ ಸಹಾಯಕ ಗಾಯಗೊಂಡಿದ್ದಾರೆ.
ಇಬ್ಬರಿಗೆ ಗಂಭೀರ ಗಾಯ!
ಕಾರ್ಕಳ-ಮೂಡುಬಿದಿರೆ ಹೆದ್ದಾರಿಯಲ್ಲಿ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದ್ದು, ಕಾರಿನಲ್ಲಿದ್ದ ಚಾಲಕ ಹಾಗೂ ಆಪ್ತ ಸಹಾಯಕ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದ್ದು, ರಮಾನಾಥ ರೈ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
READ THIS : Hubballi ರಸ್ತೆಯಲ್ಲಿ ಭೀಕರ Accident ಬೈಕ್ ಸವಾರರು ಸಾವು..!

ಅಪಘಾತಕ್ಕೆ ಕಾರಣವೇನು?
ಇನ್ನು ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಲು ನಿಖರ ಕಾರಣವೇನು ಅನ್ನೋದರ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದ್ದು, ಘಟನೆಯ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
MUST WATCH : ಮಂಗಳೂರಿನ ಬಂದರಿನಲ್ಲಿ ಸಿಎಂ ಡಿಕೆ ರೌಂಡ್ಸ್ ಕೈಯಲ್ಲಿ ಮೀನು ಹಿಡಿದು ಸಿಎಂ ಫುಲ್ ಖುಷ್





