Chitradurga ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಬಳಿ ಡಿವೈಡರ್ ದಾಟಿದ ಲಾರಿ ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ.

Chitradurga ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಿವೈಡರ್ ದಾಟಿ ಬಂದ ಲಾರಿಯೊಂದು ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಬಸ್ ಪಲ್ಟಿಯಾಗಿದ್ದರೂ, ಅದೃಷ್ಟವಶಾತ್ ಎಲ್ಲ ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಿಂಧನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದೆ.
MUST READ : ರಾಜ್ಯದ ವಿದ್ಯಾರ್ಥಿಗಳಿಗೆ Bus Pass ಶುಲ್ಕ ಮರುಪಾವತಿ – ಇಲ್ಲಿದೆ ಸಂಪೂರ್ಣ ಮಾಹಿತಿ

ನಾಲ್ವರು ಪ್ರಯಾಣಿಕರಿಗೆ ಗಾಯ
ಅಪಘಾತದಲ್ಲಿ ಬಸ್ನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸಮೀಪದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಅವರು ತಮ್ಮ ಪ್ರಯಾಣವನ್ನು ಮುಂದುವರಿಸಿದ್ದಾರೆ.
ಅಪಘಾತ ತೀವ್ರವಾಗಿದ್ದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿರುವುದು ನೆಮ್ಮದಿಯ ಸಂಗತಿಯಾಗಿದೆ.
ಘಟನಾ ಸ್ಥಳಕ್ಕೆ ತಳಕು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
MUST WATCH : DUDHAKAR ON PRADEEP ESHWAR | ವೇದಿಕೆಲಿ ಬೆಕ್ಕಿನಂತೆ ಇದ್ದು ಹೊರಗಡೆ ಬಂದು ಪೌರುಷ ತೋರಿಸಿದ್ರೆ ಜನ ಸುಮ್ನಿರ್ತಾರಾ.




