Shakthi Scheme| ಉಚಿತ ಬಸ್ ಪ್ರಯಾಣಕ್ಕೆ ವೋಟರ್ ಐಡಿ ಸ್ಮಾರ್ಟ್ ಕಾರ್ಡ್ ಕಡ್ಡಾಯ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ಸಾರಿಗೆ ಇಲಾಖೆ ಮುಂದಾಗಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿರುವ ಯೋಜನೆಯ ದುರ್ಬಳಕೆಯನ್ನು ತಡೆಯುವ ಉದ್ದೇಶದಿಂದ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರುವ ಸಿದ್ಧತೆ ನಡೆಯುತ್ತಿದೆ.
ಶಕ್ತಿ ಯೋಜನೆಗೆ ಹೊಸ ರೂಪ
Shakthi Scheme ಆರಂಭವಾದ ಬಳಿಕ ನಕಲಿ ಆಧಾರ್ ಕಾರ್ಡ್ ಬಳಸಿ ಬೇರೆ ರಾಜ್ಯಗಳ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿರುವ ಕುರಿತು ದೂರುಗಳು ಕೇಳಿಬಂದಿದ್ದವು. ಇದರಿಂದ ಸಾರಿಗೆ ನಿಗಮಗಳಿಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗುತ್ತಿದೆ ಎನ್ನಲಾಗಿದೆ.

ಯಾರಿಗೆ ಸಿಗಲಿದೆ ಸ್ಮಾರ್ಟ್ ಕಾರ್ಡ್?
ಪ್ರಸ್ತಾವಿತ ಯೋಜನೆಯ ಪ್ರಕಾರ, ಕರ್ನಾಟಕದ ಮತದಾರರ ಗುರುತಿನ ಚೀಟಿ ಹೊಂದಿರುವ ಮಹಿಳೆಯರು ಹಾಗೂ ತೃತೀಯ ಲಿಂಗಿಗಳಿಗೆ ಮಾತ್ರ ಸ್ಮಾರ್ಟ್ ಕಾರ್ಡ್ ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ.
ಕಾರ್ಡ್ ಪಡೆಯಲು ವೋಟರ್ ಐಡಿ ಹಾಗೂ ಆಧಾರ್ ಕಾರ್ಡ್ ಸಲ್ಲಿಸುವುದು ಕಡ್ಡಾಯವಾಗಲಿದೆ.
3 ಕೋಟಿ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಗುರಿ
ಸ್ಮಾರ್ಟ್ ಕಾರ್ಡ್ನಲ್ಲಿ ಫಲಾನುಭವಿಯ ಹೆಸರು, ಭಾವಚಿತ್ರ, ಆಧಾರ್ ಸಂಖ್ಯೆ ಹಾಗೂ ವಿಳಾಸದ ವಿವರಗಳು ದಾಖಲಾಗಲಿವೆ. ಈ ಕಾರ್ಡ್ ಅನ್ನು ಇತರರಿಗೆ ವರ್ಗಾಯಿಸಲು ಅವಕಾಶ ಇರುವುದಿಲ್ಲ ಎಂದು ತಿಳಿದುಬಂದಿದೆ. ರಾಜ್ಯಾದ್ಯಂತ ಸುಮಾರು 3 ಕೋಟಿ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇದರಿಂದ ಯೋಜನೆಯ ಸೌಲಭ್ಯ ಅರ್ಹರಿಗೆ ಮಾತ್ರ ತಲುಪುವಂತೆ ಮಾಡಲು ಉದ್ದೇಶಿಸಲಾಗಿದೆ.
ಇದನ್ನು ಓದಿ : ಶಕ್ತಿ ಯೋಜನೆ ಎಫೆಕ್ಟ್| Ticket Free ಅಂತ ತಮ್ಮನ ಜೊತೆ ಮನೆ ಬಿಟ್ಟು ಹೊರಟ ಬಾಲಕಿ!

ಬೆಂಗಳೂರಿನಲ್ಲಿ ಜಾರಿ
ಮೊದಲ ಹಂತದಲ್ಲಿ ಬೆಂಗಳೂರಿನ ಬಿಎಂಟಿಸಿ ವ್ಯಾಪ್ತಿಯಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತದೆ. ಬಳಿಕ ಕೆಎಸ್ಆರ್ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ವಿಸ್ತರಿಸುವ ಯೋಜನೆ ಇದೆ.
‘ನಮ್ಮ ಮೆಟ್ರೋ’ ಸಂಚಾರಕ್ಕೂ ಕಾರ್ಡ್ ಬಳಸುವ ಅವಕಾಶ
ಬಿಎಂಟಿಸಿ ಈಗಾಗಲೇ 11 ಸಾವಿರ ಸುಧಾರಿತ ಇಟಿಎಂ ಯಂತ್ರಗಳನ್ನು ಪಡೆದುಕೊಂಡಿದ್ದು, ಸ್ಮಾರ್ಟ್ ಕಾರ್ಡ್ಗಳಲ್ಲಿ ಎನ್ಎಫ್ಸಿ ತಂತ್ರಜ್ಞಾನ ಅಳವಡಿಸಲಾಗುತ್ತದೆ.
ಇದರಿಂದ ಬಸ್ಗಳ ಜೊತೆಗೆ ‘ನಮ್ಮ ಮೆಟ್ರೋ’ ಸಂಚಾರಕ್ಕೂ ಕಾರ್ಡ್ ಬಳಸುವ ಅವಕಾಶ ದೊರೆಯಲಿದೆ.

ಅರ್ಜಿ ಸಲ್ಲಿಸಿ ಕಾರ್ಡ್ ಪಡೆಯಿರಿ
ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ, ಸೈಬರ್ ಕೇಂದ್ರಗಳು ಹಾಗೂ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅರ್ಜಿ ಸಲ್ಲಿಸಿ ಕಾರ್ಡ್ ಪಡೆಯಬಹುದಾಗಿದೆ.
ಅರ್ಹ ಮಹಿಳೆಯರು ಹಾಗೂ ತೃತೀಯ ಲಿಂಗಿಗಳಿಗೆ ಕಾರ್ಡ್ಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ.
ಇದನ್ನು ನೋಡಿ : ಕುಟುಂಬಗಳ ನಡುವೆ ಜಮೀನು ವಿವಾದ – ಮಹಿಳೆಯರ ಗುಂಪು ಮಧ್ಯೆ ಡಿಶುಂ ಡಿಶುಂ.!





