ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ ಡಾ. G Parameshwar ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದ ಗ್ಲಾಸ್ಹೌಸ್ನಲ್ಲಿ ನಡೆದ ಸಮಾರಂಭದಲ್ಲಿ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ ಪರಮೇಶ್ವರ್ ಅವರನ್ನು ಸಿಎಂ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು.

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಡಾ. G Parameshwar ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಹೊಸ ಸಚಿವ ಸಂಪುಟ ರಚನೆ ವೇಳೆ ತೀವ್ರ ಕುತೂಹಲ ಮೂಡಿಸಿದ್ದ ಡಿಸಿಎಂ ಹುದ್ದೆಯ ಸಸ್ಪೆನ್ಸ್ಗೆ ಕೊನೆಗೂ ತೆರೆ ಬಿದ್ದಿದೆ. ಬೆಂಗಳೂರಿನ ಲೋಕಭವನದ ಗ್ಲಾಸ್ಹೌಸ್ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
MUST READ : KPCC ಅಧ್ಯಕ್ಷ ಸ್ಥಾನಕ್ಕೆ BK Hariprasad ಹೆಸರು ಫೈನಲ್…?

ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೂಗುಚ್ಛ ನೀಡಿ ಪರಮೇಶ್ವರ್ ಅವರನ್ನು ಅಭಿನಂದಿಸಿ ಸ್ವಾಗತಿಸಿದರು. ಈ ನೇಮಕಾತಿಯೊಂದಿಗೆ ಪರಮೇಶ್ವರ್ ರಾಜ್ಯ ಸರ್ಕಾರದಲ್ಲಿ ಎರಡನೇ ಪ್ರಮುಖ ಸ್ಥಾನವನ್ನು ಅಲಂಕರಿಸಿದ್ದಾರೆ
MUST WATCH : ಡಾ.ಜಿ ಪರಮೇಶ್ವರ್ಗೆ ಬಂಪರ್ ಆಫರ್ – ಎರಡನೇ ಬಾರಿ DCM ಆದPARAM | BENGALURU NEWS |




