
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಜಗಳ- ರೌಡಿಶೀಟರ್ ಬರ್ಬರ MURDER
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದಿದ್ದ ಗಲಾಟೆ ರೌಡಿಶೀಟರ್ ಒಬ್ಬನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನಗರದ ಪೀಣ್ಯ ಠಾಣಾ ವ್ಯಾಪ್ತಿಯ ಗುಲ್ಬರ್ಗ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ದೀಪಕ್ ಅಲಿಯಾಸ್ ದೀಪು ಎಂದು ಗುರುತಿಸಲಾಗಿದೆ. ಈತ ನಂದಿನಿ ಲೇಔಟ್ ಠಾಣೆಯ ರೌಡಿಶೀಟರ್ ಆಗಿದ್ದ.
READ THIS : ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರ ಬರ್ಬರ Murder – ಆಗಿದ್ದೇನು?
ಎರಡು ದಿನದ ಗಲಾಟೆಗೆ ಕೊಲೆಯ ಪ್ರತೀಕಾರ?
ಎರಡು ದಿನಗಳ ಹಿಂದೆ ದೀಪು, ಈಶ್ವರ್ ನೇಪಾಳಿ ಹಾಗೂ ಸುಮನ್ ಅಲಿಯಾಸ್ ಪಾರಿವಾಳ ಎಂಬವರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಸೆ.27ರ ರಾತ್ರಿ ದೀಪಕ್ ಮೇಲೆ ದಾಳಿ ಮಾಡಿದ 7-8 ಜನರ ಗ್ಯಾಂಗ್ ದಾಳಿ ಮಾಡಿ MURDER ಮಾಡಿದೆ.

ಚಾಕುವಿನಿಂದ ಇರಿದು MURDER!
ದಾಳಿಯ ವೇಳೆ ದುಷ್ಕರ್ಮಿಗಳು ದೀಪಕ್ಗೆ ಚಾಕುವಿನಿಂದ ಇರಿದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲೇ ಸಾವನ್ನಪ್ಪಿದ್ದಾನೆ.
ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಇನ್ನು ದೀಪಕ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಘಟನೆ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

MUST WATCH : ನವರಾತ್ರಿಗೆ ಕಾದಿದೆ ಬೆಲೆ ಏರಿಕೆ ಶಾಕ್ ಹಾಲು, ತುಪ್ಪ, ಸಿಹಿ.. ಎಲ್ಲವೂ ದುಬಾರಿ




