Bengaluru : ರಾಜ್ಯದ `ಕ್ರೀಡಾಪಟು’ಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

Bengaluru : ರಾಜ್ಯದ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಕ್ರೀಡಾ ಪ್ರತಿಭೆಗಳನ್ನು ಉತ್ತೇಜಿಸಲು ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಹೆಸರು ಬೆಳಗುವ ಕ್ರೀಡಾಪಟುಗಳಿಗೆ ಆರ್ಥಿಕ ನೆರವು ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಸರ್ಕಾರ ಘೋಷಿಸಿದೆ.
ಶೈಕ್ಷಣಿಕ ಶುಲ್ಕ ಮರುಪಾವತಿ
ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ವಾರ್ಷಿಕ ಗರಿಷ್ಠ 50 ಸಾವಿರ ರೂಪಾಯಿವರೆಗೆ ಶೈಕ್ಷಣಿಕ ಶುಲ್ಕ ಮರುಪಾವತಿ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದ ಕ್ರೀಡೆಯ ಜೊತೆಗೆ ಶಿಕ್ಷಣ ಮುಂದುವರಿಸುವ ವಿದ್ಯಾರ್ಥಿಗಳಿಗೆ ಹೆಚ್ಚಿನ ನೆರವು ಸಿಗಲಿದೆ.
ಕ್ರೀಡಾ ವಿದ್ಯಾರ್ಥಿ ವೇತನ
ರಾಜ್ಯ ಮಟ್ಟದಲ್ಲಿ ಪದಕ ಗೆದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 10 ಸಾವಿರ ರೂಪಾಯಿಗಳ ಕ್ರೀಡಾ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಮತ್ತಷ್ಟು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆ ಜಾರಿಯಲ್ಲಿದೆ.
ಇದನ್ನು ಓದಿ : ಒಲಂಪಿಕ್ಸ್ ಪದಕಕ್ಕೆ ಕೋಟಿ ಬಹುಮಾನ – ಕ್ರೀಡಾಪಟುಗಳಿಗೆ CM ಘೋಷಣೆ.!

ಎಸ್ಸಿ/ಎಸ್ಟಿ ಸಾಧಕ ಕ್ರೀಡಾಪಟುಗಳಿಗೆ ವಿಶೇಷ ನಗದು ಪುರಸ್ಕಾರ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಾಧಕ ಕ್ರೀಡಾಪಟುಗಳಿಗೆ ವಿಶೇಷ ನಗದು ಪುರಸ್ಕಾರವೂ ಘೋಷಿಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದ ಪದಕ ವಿಜೇತರಿಗೆ 5 ಲಕ್ಷ ರೂಪಾಯಿ, ರಾಷ್ಟ್ರೀಯ ಮಟ್ಟದ ಸಾಧಕರಿಗೆ 3 ಲಕ್ಷ ರೂಪಾಯಿ ಹಾಗೂ ರಾಜ್ಯ ಮಟ್ಟದ ಪದಕ ವಿಜೇತರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುತ್ತದೆ.
‘ಗುರಿ ಒಲಿಂಪಿಕ್ಸ್’ ಯೋಜನೆ: ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂ. ಪ್ರೋತ್ಸಾಹಧನ
ಇನ್ನು 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗುರಿಯಾಗಿಸಿಕೊಂಡು ‘ಗುರಿ ಒಲಿಂಪಿಕ್ಸ್’ ಯೋಜನೆ ಜಾರಿಗೆ ತರಲಾಗಿದೆ. ಒಲಿಂಪಿಕ್ಸ್ಗೆ ಆಯ್ಕೆಯಾಗುವ ಸಾಮರ್ಥ್ಯ ಹೊಂದಿರುವ ರಾಜ್ಯದ 60 ಪ್ರತಿಭಾವಂತ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ, ಪ್ರತಿಯೊಬ್ಬರಿಗೂ ತಲಾ 10 ಲಕ್ಷ ರೂಪಾಯಿಗಳ ಪ್ರೋತ್ಸಾಹಧನ ನೀಡುವ ಮೂಲಕ ಉನ್ನತ ಮಟ್ಟದ ತರಬೇತಿಗೆ ನೆರವು ನೀಡಲಾಗುತ್ತದೆ.
ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡುವಂತೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಈ ಯೋಜನೆಗಳು ಕ್ರೀಡಾಪಟುಗಳಲ್ಲಿ ಹೊಸ ಉತ್ಸಾಹ ಮೂಡಿಸಿದ್ದು, ಕರ್ನಾಟಕದಿಂದ ಮತ್ತಷ್ಟು ಅಂತರರಾಷ್ಟ್ರೀಯ ಮಟ್ಟದ ಸಾಧಕರು ಹೊರಹೊಮ್ಮುವ ನಿರೀಕ್ಷೆ ವ್ಯಕ್ತವಾಗಿದೆ.

ಇದನ್ನು ನೋಡಿ : MOHARAM ಆಚರಣೆ ವೇಳೆ ದುರಂತ – ಕೊಂಡಕ್ಕೆ ಬಿದ್ದ ವ್ಯಕ್ತಿ ಸಾ*




