ಗ್ರಾಹಕರಿಗೆ ಗುಡ್ ನ್ಯೂಸ್ – ಈ ತಿಂಗಳು ಮನೆಗೆ Current Bill ಬರಲ್ಲ!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ.
ಜುಲೈ ತಿಂಗಳ ಕರೆಂಟ್ ಬಿಲ್ ಬರಲ್ಲ
ಅನರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಸಿಗಬಾರದೆಂದು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಫಿಲ್ಟರ್ ಮಾಡುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ ಆಪರೇಷನ್ ಗೃಹಜ್ಯೋತಿ ಶುರುವಾಗಿದೆ. ಹೀಗಾಗಿ ಜುಲೈನಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ. ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ನೀಡಲು ಬೆಸ್ಕಾಂ ಮುಂದಾಗಿದೆ.
ಇದನ್ನು ಓದಿ : ಗೃಹಜ್ಯೋತಿ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಲ್ಲ- DK Shivakumar ಸ್ಪಷ್ಟನೆ..!!

ಬೆಸ್ಕಾಂ ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?
ಇನ್ನು ಈ ಕುರಿತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆಗಾಗಿ ಮೀಟರ್ ರೀಡರ್ಗಳನ್ನು ನಿಯೋಜಿಸಲಾಗಿದೆ. ಈ ಕಾರಣದಿಂದ ಜುಲೈ ತಿಂಗಳಲ್ಲಿ ನಿಯಮಿತ ಮೀಟರ್ ರೀಡಿಂಗ್ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಮೀಟರ್ ರೀಡಿಂಗ್ ಬದಲಾಗಿ, ಕಳೆದ ಮೂರು ತಿಂಗಳ ವಿದ್ಯುತ್ ಬಳಕೆಯ ಸರಾಸರಿಯನ್ನು ಆಧರಿಸಿ ಜುಲೈ ತಿಂಗಳ ವಿದ್ಯುತ್ ಬಿಲ್ ಸಿದ್ಧಪಡಿಸಿ ಗ್ರಾಹಕರಿಗೆ ನೀಡಲಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ.

ನಿಯಮ ಯಾರಿಗೆ ಅನ್ವಯ?
ಆದರೆ ಈ ನಿಯಮ ಎಲ್ಲರಿಗೂ ಅನ್ವಯಿಸುವುದಿಲ್ಲ. ಹೆಚ್.ಟಿ. ಗ್ರಾಹಕರು, 40 ಹೆಚ್.ಪಿ. ಮತ್ತು ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್.ಟಿ. ಗ್ರಾಹಕರು, ಸೋಲಾರ್ ರೂಫ್ಟಾಪ್ ಬಳಕೆದಾರರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಎಂದಿನಂತೆ ಮೀಟರ್ ರೀಡಿಂಗ್ ಮಾಡಿ ಬಿಲ್ ನೀಡಲಾಗುತ್ತದೆ.
ಇದನ್ನು ನೋಡಿ : ಬಸ್ ಕಿಟಕಿ ಆಚೆ ತಲೆ ಹಾಕಿದ್ದ ವಿದ್ಯಾರ್ಥಿಯ ತಲೆಯೇ ಕಟ್..!





