ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಗುಡ್ನ್ಯೂಸ್!

ಗ್ರಾಮೀಣ ಭಾಗದಲ್ಲಿ ಆಸ್ತಿ ಹೊಂದಿರುವ ಜನರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗ್ರಾಮಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇರುವ ಹಾಗೂ ದಾಖಲೆಗಳಿಲ್ಲದ ಆಸ್ತಿಗಳಿಗೂ ಇ-ಸ್ವತ್ತು ನೀಡಲು ಸರ್ಕಾರ ನಿರ್ಧರಿಸಿದೆ.
ಅರ್ಜಿ ಸಲ್ಲಿಸಲು ಅವಕಾಶ
ನವೆಂಬರ್ 2ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹಲವು ವರ್ಷಗಳಿಂದ ಗ್ರಾಮಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಆಸ್ತಿ ಮಾಲೀಕರು ದಾಖಲೆಗಳಿಲ್ಲದೆ ಪರದಾಡುವಂತಾಗಿತ್ತು. ಈ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ.
READ THIS : ನಿಮ್ಮ ಅತ್ರ ಪೋನ್ ಇದ್ರೆ ಸಾಕು ಮನೆಯಲ್ಲಿ ಪಡೆಯಬಹುದು ಇ-ಖಾತಾ

ಗ್ರಾಮಠಾಣಾ ಆಸ್ತಿಗಳಿಗೆ ಇ-ಸ್ವತ್ತು ನೀಡಲು ಸರ್ಕಾರ ನಿರ್ಧಾರ!
ಜೊತೆಗೆ ಇ-ಸ್ವತ್ತು 2 ತಂತ್ರಾಂಶದಲ್ಲೂ ಅಗತ್ಯ ಬದಲಾವಣೆಗಳನ್ನು ಮಾಡಲಾಗಿದೆ. ಇನ್ನು ದಾಖಲೆಗಳು ಲಭ್ಯವಿಲ್ಲದ ಗ್ರಾಮಠಾಣಾ ಆಸ್ತಿಗಳಿಗೆ ನೋಂದಾಯಿತ ದಾಖಲೆಗಳಿಂದ ವಿನಾಯಿತಿ ನೀಡಲಾಗಿದೆ.
2025ರ ಏಪ್ರಿಲ್ 7ಕ್ಕೂ ಮುನ್ನ ಪಡೆದಿರುವ ವಿದ್ಯುತ್ ಬಿಲ್ ಆಧಾರವಾಗಿ ಹಾಗೂ ಸ್ಥಳ ಪರಿಶೀಲನೆ ನಡೆಸಿ ಇ-ಸ್ವತ್ತು ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಇದ್ರಿಂದ ಅಂದಾಜು 25ರಿಂದ 30 ಲಕ್ಷ ಜನರಿಗೆ ಅನುಕೂಲವಾಗುವ ನಿರೀಕ್ಷೆಯಿದೆ.

MUST WATCH : ವಿದ್ಯಾರ್ಥಿನಿ ಸಾ*ಗೆ ಗೌರಿಶಂಕರ್ ಆಕ್ರೋಶ – ಶಿಕ್ಷಕ–ಶಾಲೆಯ ವಿರುದ್ಧ ಕ್ರಮಕ್ಕೆ ಒತ್ತಾಯ..!




