
ರಾಜ್ಯದ ಜನತೆಗೆ ಬೆಲೆಯೇರಿಕೆ ಬರೆ: ನಂದಿನಿ ಹಾಲಿನ ದರ ಲೀಟರ್ಗೆ ₹5 ಏರಿಕೆಗೆ ಸರ್ಕಾರದ ಸಮ್ಮತಿ!
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಹೌದು.. ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ₹5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.
ರಾಜ್ಯದ ಜನತೆಗೆ ಬೆಲೆಯೇರಿಕೆ ಬರೆ!
ಹಾಲಿನ ಉತ್ಪಾದನೆ ಹಾಗೂ ನಿರ್ವಹಣಾ ವೆಚ್ಚದಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ಮಾರಾಟ ದರವನ್ನು ಪರಿಷ್ಕರಿಸಬೇಕು ಎಂದು ರಾಜ್ಯದ 16 ಹಾಲು ಒಕ್ಕೂಟಗಳ ಸಂಘ ಸರ್ಕಾರಕ್ಕೆ ಒತ್ತಾಯಿಸಿತ್ತು. ಆರಂಭದಲ್ಲಿ ಪ್ರತಿ ಲೀಟರ್ಗೆ ₹10ರಷ್ಟು ದರ ಹೆಚ್ಚಳ ಮಾಡುವಂತೆ ಒಕ್ಕೂಟಗಳು ಬೇಡಿಕೆ ಸಲ್ಲಿಸಿದ್ದವು.
READ THIS : KMF ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ – ಇಂದಿನಿಂದ ಹೊಸ ದರ ಜಾರಿ!

ದರ ಏರಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ‘ವಿಧಾನಸೌಧ ಚಲೋ’ ನಡೆಸುವುದಾಗಿ ಹಾಲು ಒಕ್ಕೂಟಗಳು ಎಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರವು ಹಾಲು ಉತ್ಪಾದಕರ ಬೇಡಿಕೆ ಹಾಗೂ ಗ್ರಾಹಕರ ಮೇಲಿನ ಆರ್ಥಿಕ ಹೊರೆಯನ್ನು ಪರಿಗಣಿಸಿ ಮಧ್ಯಮ ಮಾರ್ಗ ಕಂಡುಕೊಂಡಿದೆ ಎನ್ನಲಾಗಿದೆ.
ಪ್ರತಿ ಲೀಟರ್ಗೆ ₹4ರಿಂದ ₹5ರಷ್ಟು ಹೆಚ್ಚಳ?
ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳದಂತೆ ನೋಡಿಕೊಳ್ಳುವುದರ ಜೊತೆಗೆ ಹಾಲು ಉತ್ಪಾದಕ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು ₹4ರಿಂದ ₹5ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಹಾಲು ಉತ್ಪಾದಕ ರೈತರ ಹಿತಾಸಲಿಯನ್ನು ಕಾಪಾಡುವ ನಿಟ್ಟಿನಲ್ಲಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿದೆ.

MUST WATCH : ಇದು ಬಿಕಾರಿ ಸರ್ಕಾರ, ಪಾಪರ್ ಆಗಿದೆ – ಸರ್ಕಾರದ ವಿರುದ್ದ ಅಶೋಕ್ ವಾಗ್ದಾಳಿ




