Government Job : ಕರ್ನಾಟಕ ರಾಜ್ಯ ಸರ್ಕಾರ ಉದ್ಯೋಗ ಆಕಾಂಕ್ಷಿಗಳಿಗೆ ದೊಡ್ಡ ಸಿಹಿ ಸುದ್ದಿ ನೀಡಿದೆ.

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ರಾಜ್ಯದ ಲಕ್ಷಾಂತರ ಯುವಜನತೆಗೆ ಕರ್ನಾಟಕ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72 ಸಾವಿರದ 186 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಗುಡ್ ನ್ಯೂಸ್!
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದ್ದು, ನೇಮಕಾತಿ ಪ್ರಕ್ರಿಯೆಗೆ ವೇಗ ನೀಡಲು ಉನ್ನತ ಮಟ್ಟದ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ.
ಇದನ್ನು ಓದಿ : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬಂಪರ್ ನೇಮಕಾತಿ!

ಒಟ್ಟು ಹುದ್ದೆಗಳ ವಿವರ
• ಒಟ್ಟು ಹುದ್ದೆಗಳು – 72,186
• ಸಾಮಾನ್ಯ ಖಾಲಿ ಹುದ್ದೆಗಳು – 40,009
• ಕಲ್ಯಾಣ ಕರ್ನಾಟಕ ವೃಂದ – 32,177
2023-24ನೇ ಸಾಲಿನಿಂದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40 ಸಾವಿರದ 9 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಮ್ಮತಿ ನೀಡಿದೆ.
ಇದೇ ವೇಳೆ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ ಶೇಕಡಾ 80ರಷ್ಟು ಖಾಲಿ ಹುದ್ದೆಗಳಾದ 32 ಸಾವಿರದ 177 ಹುದ್ದೆಗಳ ಭರ್ತಿಗೂ ಅನುಮೋದನೆ ದೊರೆತಿದೆ.
ನೇಮಕಾತಿ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ಕೃಷಿ, ಪಶುಸಂಗೋಪನೆ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ತೋಟಗಾರಿಕೆ, ಮೀನುಗಾರಿಕೆ, ಸಹಕಾರ, ಸಮಾಜ ಕಲ್ಯಾಣ, ಜಲಸಂಪನ್ಮೂಲ, ಕಂದಾಯ, ಇಂಧನ ಹಾಗೂ ಲೋಕೋಪಯೋಗಿ ಸೇರಿದಂತೆ 17 ಇಲಾಖೆಗಳ ಜವಾಬ್ದಾರಿಯನ್ನು ಅಭಿವೃದ್ಧಿ ಆಯುಕ್ತರಿಗೆ ವಹಿಸಲಾಗಿದೆ.
ಮತ್ತೊಂದೆಡೆ ಕೌಶಲ್ಯಾಭಿವೃದ್ಧಿ, ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು, ಶಾಲಾ ಶಿಕ್ಷಣ, ಆರೋಗ್ಯ, ಉನ್ನತ ಶಿಕ್ಷಣ, ಒಳಾಡಳಿತ, ವಸತಿ, ಪ್ರವಾಸೋದ್ಯಮ, ಸಾರಿಗೆ ಹಾಗೂ ನಗರಾಭಿವೃದ್ಧಿ ಸೇರಿದಂತೆ 34 ಇಲಾಖೆಗಳ ನೇಮಕಾತಿ ಪ್ರಕ್ರಿಯೆಯ ಮೇಲ್ವಿಚಾರಣೆಯನ್ನು ಅಪರ ಮುಖ್ಯ ಕಾರ್ಯದರ್ಶಿಗೆ ವಹಿಸಲಾಗಿದೆ.

ಕಟ್ಟುನಿಟ್ಟಿನ ಕಾಲಮಿತಿ (ಗಡುವು)
ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ವೇಗವಾಗಿ ಮುಗಿಸಲು ಸರ್ಕಾರವು ಕಟ್ಟುನಿಟ್ಟಿನ ಕಾಲಮಿತಿಯನ್ನು ವಿಧಿಸಿದೆ:
ಮುಂದಿನ 2 ತಿಂಗಳ ಒಳಗಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕು.
ಮುಂದಿನ 4 ತಿಂಗಳ ಒಳಗಾಗಿ ಸಂಬಂಧಪಟ್ಟ ಪರೀಕ್ಷೆಗಳನ್ನು ನಡೆಸಬೇಕು.
ನೇಮಕಾತಿ ಪ್ರಕ್ರಿಯೆ ಯಾವಾಗ ಆರಂಭ?
ಮುಂದಿನ 6 ತಿಂಗಳ ಒಳಗಾಗಿ ಒಟ್ಟಾರೆ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಕಡ್ಡಾಯವಾಗಿ ನೇಮಕಾತಿ ಆದೇಶಗಳನ್ನು ಹೊರಡಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರವು ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಇನ್ನು ಈ ಮಹತ್ವಾಕಾಂಕ್ಷಿ ನೇಮಕಾತಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕರಿಗೆ ಹೊಸ ಆಶಾಕಿರಣ ಮೂಡಿಸಿದ್ದು, ಸಾವಿರಾರು ಕುಟುಂಬಗಳ ಕನಸು ನನಸಾಗುವ ನಿರೀಕ್ಷೆ ಹೆಚ್ಚಿಸಿದೆ.

ಇದನ್ನು ನೋಡಿ : BJP ಬಗ್ಗೆ ದೊಡ್ಡ ಬಾಂಬ್ ಸಿಡಿಸಿದ ಉಚ್ಛಾಟಿತ ಶಾಸಕ ಎಸ್.ಟಿ ಸೋಮಶೇಖರ್




