ವಾಲ್ಮೀಕಿ ನಿಗಮ ಹಗರಣ – B Nagendra ರಾಜೀನಾಮೆ ಅಂಗೀಕಾರಿಸಿದ ರಾಜ್ಯಪಾಲರು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ.
ಅಧಿಕೃತ ಅಧಿಸೂಚನೆಯನ್ನು ಇಂದು ಬಿಡುಗಡೆ
B Nagendra ಅವರ ರಾಜೀನಾಮೆಯನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ್ದು, ಈ ಕುರಿತು ಆಗಸ್ಟ್ 29ರಂದು ಹೊರಡಿಸಲಾಗಿದ್ದ ಅಧಿಕೃತ ಅಧಿಸೂಚನೆಯನ್ನು ಇಂದು ಬಿಡುಗಡೆ ಮಾಡಲಾಗಿದೆ.
READ THIS : ವಾಲ್ಮೀಕಿ ನಿಗಮ ಹಗರಣ – ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಏನಿದು ಪ್ರಕರಣ?
ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಕೋಟ್ಯಂತರ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾದ ಪ್ರಕರಣ ಬೆಳಕಿಗೆ ಬಂದ ಬಳಿಕ ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ತೀವ್ರ ಒತ್ತಡ ಹೇರಿದ್ದವು. ನಿಗಮದ ಲೆಕ್ಕಪತ್ರ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡು ಬರೆದಿದ್ದ ಪತ್ರದಲ್ಲೂ ಹಣ ವರ್ಗಾವಣೆಗೆ ಸಂಬಂಧಿಸಿದ ಗಂಭೀರ ಆರೋಪಗಳು ಕೇಳಿಬಂದಿದ್ದವು.
ಹಗರಣದಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ನಾಗೇಂದ್ರ ಸ್ಪಷ್ಟಪಡಿಸಿದ್ದರು. ಆದರೆ ಪ್ರಕರಣದಿಂದ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ತಾವಾಗಿಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಅವರು ಹೇಳಿದ್ದರು.

ಹಣ ದುರುಪಯೋಗದ ಆರೋಪ
ಹಣ ದುರುಪಯೋಗದ ಆರೋಪಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ್ದರು. ವಾಲ್ಮೀಕಿ ನಿಗಮ ಪ್ರಕರಣ ಸಂಬಂಧ 2024ರ ಜುಲೈನಲ್ಲಿ ಬಂಧನವಾಗಿ ಮೂರು ತಿಂಗಳ ಬಳಿಕ ಜಾಮೀನಿನ ಮೇಲೆ ನಾಗೇಂದ್ರ ಜೈಲಿನಿಂದ ರಿಲೀಸ್ ಆಗಿದ್ದರು. ನಂತರ ನಾಗೇಂದ್ರ ಅವರನ್ನು ಇದೇ ಆಗಸ್ಟ್ 3ರಂದು ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿ ಯೋಜನೆ ಮತ್ತು ಸಾಂಖ್ಯಿಕ ಖಾತೆಯನ್ನು ನೀಡಲಾಗಿತ್ತು.
MUST WATCH : ವಿಜಯೇಂದ್ರ ತಂದೆಯನ್ನೇ ಜೈಲಿಗೆ ಕಳಿಸಿದ್ರು ಬಿಜೆಪಿಗೆ ಬಿಕೆ ಹರಿಪ್ರಸಾದ್ ತಿರುಗೇಟು




