Tumakuru : ಇಂದು 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ

Tumakuru : ಇಂದು 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ತುಮಕೂರು ಜಿಲ್ಲಾಡಳಿತ ವತಿಯಿಂದ ನಗರದ ಮಹಾತ್ಮ ಗಾಂಧಿ ಸ್ಟೇಡಿಯಂನಲ್ಲಿ ಅದ್ದೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯ್ತು. ಇನ್ನು ಸ್ಟೇಡಿಯಂನಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

ಕವಾಯತು ವೀಕ್ಷಿಸಿದ DCM ಪರಂ
ಧ್ವಜಾರೋಹಣದ ಬಳಿಕ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಕವಾಯತು ವೀಕ್ಷಿಸಿದರು. ವಿವಿಧ ಪಡೆಗಳ ಸುಮಾರು 30 ಕವಾಯತು ತಂಡಗಳು ಪಥಸಂಚಲನ ನಡೆಸಿ ರಾಷ್ಟ್ರಭಕ್ತಿಯ ಸಂಭ್ರಮವನ್ನು ಹೆಚ್ಚಿಸಿದವು. ಪೊಲೀಸ್ ಪಡೆ, ನಿವೃತ್ತ ಸೈನಿಕರು, ಎನ್ಸಿಸಿ, ಎನ್ಎಸ್ಎಸ್ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಪಥಸಂಚಲನದಲ್ಲಿ ನಡೆಯಿತು.
ಇದನ್ನು ಓದಿ : ಶ್ರಾವಣ ಶನಿವಾರ! ಇಂದು ಈ ರಾಶಿಗೆ ಯಶಸ್ಸಿನ ಫಲ ಪ್ರಾಪ್ತಿ!

ಸಿದ್ಧಗಂಗಾ ಮಠದಲ್ಲೂ ಸ್ವಾತಂತ್ರ್ಯೋತ್ಸವದ ಸಂಭ್ರಮ
ಇನ್ನು ತುಮಕೂರಿನ ಸಿದ್ಧಗಂಗಾ ಮಠದಲ್ಲೂ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಶ್ರೀಗಳು ಭಾಗವಹಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

Tumakuru – ಜಾಮೀಯಾ ಮಸೀದಿಯಲ್ಲೂ ಸ್ವಾತಂತ್ರ್ಯ ದಿನಾಚರಣೆ ಆಚರಣೆ
ನಗರದ ಮಂಡಿಪೇಟೆಯಲ್ಲಿರುವ ಜಾಮೀಯಾ ಮಸೀದಿಯಲ್ಲೂ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಜ್ಯೋತಿ ಗಣೇಶ್ ಹಾಗೂ ಸುರೇಶ್ ಗೌಡ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಎಸ್ಪಿ ಅಶೋಕ್ ಕೆ.ವಿ. ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

ಇದನ್ನು ನೋಡಿ : ತುಮಕೂರಲ್ಲಿ ಕಂಗೊಳಿಸಿದ ತ್ರಿವರ್ಣ ಧ್ವಜ – ನೂರಾರು ವಿದ್ಯಾರ್ಥಿಗಳಿಂದ ತಿರಂಗಾ ಯಾತ್ರೆ




