Gruha Jyothi ಫಲಾನುಭವಿಗಳೇ ಗಮನಿಸಿ : ಉಚಿತ ವಿದ್ಯುತ್ ಪಡೆಯಲು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ.!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ (Gruha Jyothi) ಯೋಜನೆಯ ಫಲಾನುಭವಿಗಳಿಗೆ ಪ್ರಮುಖ ಮಾಹಿತಿ ಇಲ್ಲಿದೆ. ಯೋಜನೆಯ ಪುನರ್ಪರಿಶೀಲನಾ ಕಾರ್ಯ ಜುಲೈ 1ರಿಂದ ಆರಂಭವಾಗಿದ್ದು, ಎಸ್ಕಾಂ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.
ಮೀಟರ್ ರೀಡರ್ಗಳು ಹಾಗೂ ಸಿಬ್ಬಂದಿ ಮನೆ-ಮನೆಗೆ ಭೇಟಿ
ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ನವೀಕರಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಎಸ್ಕಾಂಗಳ ಮೀಟರ್ ರೀಡರ್ಗಳು ಹಾಗೂ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಜೊತೆಗೆ ಮೊಬೈಲ್ ಆ್ಯಪ್ ಹಾಗೂ ಘೋಷಣಾ ಪತ್ರದ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ. ಪರಿಶೀಲನೆ ವೇಳೆ ಫಲಾನುಭವಿಗಳು ಕೆಲವು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ : ಗುಡ್ ನ್ಯೂಸ್ – ಜುಲೈ ತಿಂಗಳ ಕರೆಂಟ್ ಬಿಲ್ ಬರಲ್ಲ
ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ.!
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಮತದಾರರ ಗುರುತಿನ ಚೀಟಿ
- ಪಾನ್ ಕಾರ್ಡ್
- ಬಾಡಿಗೆ ಒಪ್ಪಂದ ಪತ್ರ (ಅನ್ವಯಿಸುವಲ್ಲಿ)
- ಪಡಿತರ ಚೀಟಿ
- ಜಾತಿ ಪ್ರಮಾಣ ಪತ್ರ
ಪರಿಶೀಲನಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ನಿಮ್ಮ ಸಹಕಾರವಿರಲಿ. ಗೃಹಜ್ಯೋತಿ ಯೋಜನೆಯ ಪ್ರಯೋಜನವನ್ನು ನಿರಂತರವಾಗಿ ಪಡೆಯಿರಿ.

ಇದನ್ನು ನೋಡಿ : ತುಮಕೂರಿನ ರೈಲ್ವೆ ಪ್ರಯಾಣಿಕರಿಗೆ ಮತ್ತೊಂದು ಗುಡ್ನ್ಯೂಸ್ ಕೊಟ್ಟ ಕೇಂದ್ರ ರೈಲ್ವೆ ಸಚಿವ ಸೋಮಣ್ಣ




