Gruha Laksmi Scheme: ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಕುರಿತು ಯಾವುದೇ ಗೊಂದಲ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

Gruha Laksmi Scheme ಹಣ ಬಿಡುಗಡೆ ಕುರಿತು ಯಾವುದೇ ಗೊಂದಲ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಕಂತಿನ ಹಣ ನೇರವಾಗಿ ಡಿಬಿಟಿ (DBT) ಮೂಲಕ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿದೆ ಎಂದು ಅವರು ಹೇಳಿದ್ದಾರೆ.
ಗೃಹಲಕ್ಷ್ಮೀ ಹಣ ತಲುಪುತ್ತಿಲ್ಲ ಎಂಬ ಆರೋಪ- ಸದನದಲ್ಲಿ ಗದ್ದಲ
ಗೃಹಲಕ್ಷ್ಮೀ ಯೋಜನೆಯ ಹಣ ಮಹಿಳೆಯರ ಖಾತೆಗೆ ಸರಿಯಾಗಿ ತಲುಪುತ್ತಿಲ್ಲ ಎಂದು ವಿಪಕ್ಷಗಳು ಆರೋಪಿಸಿದ್ದು, ಬುಧವಾರ ಸದನದಲ್ಲಿ ಈ ವಿಚಾರವಾಗಿ ಭಾರೀ ಗದ್ದಲ ಉಂಟಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದವು.
ಈ ಹಿನ್ನೆಲೆಯಲ್ಲಿ ಮಾತನಾಡಿದ ಸಚಿವೆ, “ಆದಷ್ಟು ಬೇಗ ಬಾಕಿ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ” ಎಂದು ಭರವಸೆ ನೀಡಿದರು.
ಇಲ್ಲಿವರೆಗೆ 23 ಕಂತು ಬಿಡುಗಡೆ- ₹46,000 ಕೋಟಿ ಜಮಾ
ಗೃಹಲಕ್ಷ್ಮೀ ಗದ್ದಲದ ಕುರಿತು ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಯೋಜನೆ ಆರಂಭವಾದ ಬಳಿಕ ಇಲ್ಲಿವರೆಗೆ 23 ಕಂತುಗಳ ಹಣ ಬಿಡುಗಡೆ ಆಗಿದ್ದು, ಒಟ್ಟು ₹46,000 ಕೋಟಿ
ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.
ವಿಪಕ್ಷಗಳು ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣದ ಬಗ್ಗೆ ಪ್ರಶ್ನೆ ಎತ್ತಿದ್ದು, ಅದಕ್ಕೆ ಉತ್ತರವಾಗಿ 23 ಕಂತಿನ ಹಣ ಈಗಾಗಲೇ ಜಮಾ ಆಗಿದೆ ಎಂದು ತಿಳಿಸಿದ್ದಾಗಿ ಹೇಳಿದರು.
ಎರಡು ತಿಂಗಳ ಹಣದ ಬಗ್ಗೆ ಸಿಎಂ ಜೊತೆ ಚರ್ಚೆ- ಲಕ್ಷ್ಮೀ ಹೆಬ್ಬಾಳ್ಕರ್
ಎರಡು ತಿಂಗಳ ಹಣ ಇನ್ನೂ ಬಿಡುಗಡೆ ಆಗಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವೆ,
ಸಿಎಂ ಸಿದ್ದರಾಮಯ್ಯ ಅವರು ಹಣಕಾಸು ಸಚಿವರೂ ಆಗಿದ್ದಾರೆ. ಈ ಕುರಿತು ಅವರೊಂದಿಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.
“ಹಣ ಬಿಡುಗಡೆ ಆಗದೇ ಇದ್ದರೆ ಖಂಡಿತಾ ಬಿಡುಗಡೆ ಮಾಡುತ್ತೇವೆ. ಸರ್ಕಾರದ ಬಳಿ ಹಣ ಇಲ್ಲ ಎಂಬ ಆರೋಪ ಸತ್ಯವಲ್ಲ” ಎಂದು ಸ್ಪಷ್ಟಪಡಿಸಿದರು.
ವಿಪಕ್ಷಗಳ ಆರೋಪಕ್ಕೆ ತಿರುಗೇಟು
ಹಾದಿ–ಬೀದಿಯಲ್ಲಿ ಗ್ಯಾರಂಟಿ ಯೋಜನೆಗಳ ವಿರುದ್ಧ ಟೀಕೆ ಮಾಡಿದವರು ಬಿಜೆಪಿಯವರೇ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದರು.
ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಸದನದಲ್ಲಿ ತಪ್ಪು ಮಾಹಿತಿ ಆರೋಪ; ಸಚಿವೆ ಸ್ಪಷ್ಟನೆ
ಸದನದಲ್ಲಿ ತಪ್ಪು ಮಾಹಿತಿ ನೀಡಿದ್ದೀರಿ ಎಂಬ ವಿಪಕ್ಷಗಳ ಆರೋಪಕ್ಕೆ ಉತ್ತರಿಸಿದ ಸಚಿವೆ,
“ಸದನದ ದಿಕ್ಕು ತಪ್ಪಿಸುವ ಯಾವುದೇ ಕೆಲಸ ನಾನು ಮಾಡಿಲ್ಲ. ಯಾರಾದರೂ ಭಾವನೆಗಳಿಗೆ ಧಕ್ಕೆಯಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ” ಎಂದರು.
👉 ಇದುವರೆಗೆ ₹52,000 ಕೋಟಿ ಹಣ ಕಂತುಗಳ ಮೂಲಕ ಜಮಾ ಮಾಡಲಾಗಿದೆ. ಉಳಿದ ಎರಡು ತಿಂಗಳ ಹಣ ಬಿಡುಗಡೆ ಮಾಡುವುದಕ್ಕೂ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಗೃಹಲಕ್ಷ್ಮೀ ಹಣ ಶೀಘ್ರ ಜಮಾ ಭರವಸೆ
ಸರ್ಕಾರದಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,
“ನಮಗೆ ಕಮಿಟ್ಮೆಂಟ್ ಇದೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತಾಡಿ, ಬಾಕಿ ಇರುವ ಹಣವನ್ನು ಆದಷ್ಟು ಬೇಗ ಮಹಿಳೆಯರ ಖಾತೆಗೆ ಜಮಾ ಮಾಡುತ್ತೇವೆ” ಎಂದು ತಿಳಿಸಿದರು.




